ವೃಕ್ಷಗಳನ್ನು ನಾವು ರಕ್ಷಿಸಿದರೆ ವೃಕ್ಷವು ನಮ್ಮನ್ನು ರಕ್ಷಿಸುತ್ತದೆ : ಡಾ. ಆರ್.ಅನುರಾಧ ಪಟೇಲ್

ಚುಂಚಾದ್ರಿ ಮಹಿಳಾ ವೇದಿಕೆಯಿಂದ ಪರಿಸರ ದಿನಾಚರಣೆ
ಭದ್ರಾವತಿ: ಧರ್ಮೋ ರಕ್ಷತಿ ರಕ್ಷಿತಃ ಎನ್ನುವಂತೆ ವೃಕ್ಷೇ ರಕ್ಷತಿ ರಕ್ಷಿತಃ. ಅಂದರೆ ವೃಕ್ಷವನ್ನು ನಾವು ರಕ್ಷಿಸಿದರೆ ವೃಕ್ಷವು ನಮ್ಮನ್ನು ರಕ್ಷಿಸುತ್ತದೆ. ಆದ್ದರಿಂದ ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್.ಅನುರಾಧ ಪಟೇಲ್ ಅಭಿಪ್ರಾಯಪಟ್ಟರು. 
     ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ  ಹುತ್ತಾಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಧನ್ವಂತರಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ  ಮಾತನಾಡಿದರು.
      ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಪ್ರಜ್ಞೆ  ಹೊಂದಬೇಕು.  ಸಂಘ ಸಂಸ್ಥೆಗಳು ಮುಂದೆ ಬಂದು ನಗರದ ವಿವಿಧ ಬಡಾವಣೆಗಳಲ್ಲಿರುವ ಉದ್ಯಾನವನಗಳನ್ನು ನಿರ್ವಹಿಸುವುದಾದರೆ ನಗರಸಭೆ ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು. 
      ಸಹಾಯಕ ಅರಣ್ಯಾಧಿಕಾರಿ ರಮೇಶ್ ಪುಟ್ನಳ್ಳಿ, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್ ಭೂಮಿ ತಾಯಿಯನ್ನು ರಕ್ಷಿಸುವುವ ಜವಾಬ್ದಾರಿ ಎಲ್ಲಾ ನಾಗರೀಕರ ಕರ್ತವ್ಯವಾಗಿದೆ ಎಂದರು. 
    ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಶೃತಿ, ಪೌರ ಕಾರ್ಮಿಕರಾದ ಅಂತೋಣಿ, ಶಾಂತ ಹಾಗೂ  ಉದ್ಯಾನವನ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ಸ್ಥಳೀಯ ಹಿರಿಯರಾದ ನಂಜುಂಡೇಗೌಡ, ತಮ್ಮಯ್ಯಗೌಡ, ರಾಮಣ್ಣ, ಶಿವರಾಮಣ್ಣ,  ರೆಡ್ಡಿ, ಭೈರಪ್ಪಗೌಡ ಹಾಗೂ  ದಿನೇಶ್ ಸೇರಿದಂತೆ ಹಲವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಕಾರ್ಯಕ್ರಮದಲ್ಲಿ ಸಸಿಗಳನ್ನು ವಿತರಸಿ ಸಿಹಿ ಹಂಚಲಾಯಿತು. ಚುಂಚಾದ್ರಿ ಮಹಿಳಾ ವೇದಿಕೆ ಕಾರ್ಯದರ್ಶಿ ಲತಾ ಪ್ರಭಾಕರ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಶೀಲಾ ರವಿ ವಂದಿಸಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.