ಪ್ರಮೋದ್ ಮುತಾಲಿಕ್ ವಿರುದ್ಧ ರಾಜ್ಯಾದ್ಯಂತ ದೂರು : ಸಿ. ಎಂ. ಖಾದರ್

ಭದ್ರಾವತಿ: ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೊಟ್ಟಿರುವ ಪ್ರಚೋದನಾಕಾರಿ ಹೇಳಿಕೆಯನ್ನು ವಿರೋಧಿಸಿ ನಗರದಲ್ಲಿ ಕರ್ನಾಟಕ ಪ್ರದೇಶ    ಕಾಂಗ್ರೆಸ್ ಸಮಿತಿಯ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ  ಸಿ.ಎಮ್ ಖಾದರ್ ರವರ ನೇತೃತ್ವದಲ್ಲಿ  ನಗರ ಪೋಲೀಸ್ ವೃತ್ತ ನಿರೀಕ್ಷಕರ ಕಚೇರಿಗೆ ತೆರಳಿ  ಪ್ರಮೋದ್ ಮುತಾಲಿಕ್ ವಿರುದ್ಧ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.
     ಧ್ವನಿವರ್ಧಕವನ್ನು ನಿಲ್ಲಿಸಲು ಆಗದೇ ಹೋದರೆ ಸರ್ಕಾರವನ್ನು ನನ್ನ ಕೈಗೆ ಒಪ್ಪಿಸಿ ಎಲ್ಲರನ್ನೂ ಗುಂಡಿಕ್ಕಿ ಕೊಲ್ಲುವೆ ಎಂದು ಬೇಜವಾಬ್ದಾರಿ ಮತ್ತು ಪ್ರಚೋದನಕಾರಿ ಹೇಳಿಕೆ  ನೀಡಿರುವ ಮುತಾಲಿಕ್ ವಿರುದ್ಧ ಪಕ್ಷದ ಸೂಚನೆಯಂತೆ ರಾಜ್ಯಾದ್ಯಂತ ದೂರು ದಾಖಲಿಸಲಾಗುತ್ತಿದೆ ಎಂದು ಸಿ ಎಂ ಖಾದರ್ ತಿಳಿಸಿದ್ದಾರೆ. 
     ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಆಮೋಸ್,  ಭದ್ರಾವತಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹ್ಮದ್,  ಉಪಾಧ್ಯಕ್ಷ ತಬ್ರೇಜ್ ಖಾನ್, ಯುವ ಕಾಂಗ್ರೆಸ್ ಮುಖಂಡ ಸಯ್ಯದ್ ಮುಬಾರಕ್ ಯುವ ಕಾಂಗ್ರೆಸ್ ಕಾರ್ಯಕರ್ತ ಫೈಜಲ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.