*ರೈಲ್ವೇ ಸ್ಟೇಷನ್‍ನಲ್ಲಿ ಯೋಗ- ಸ್ವಚ್ಚತೆ-ಗಿಡ ನೆಡುವ ಕಾರ್ಯಕ್ರಮ*
ಶಿವಮೊಗ್ಗ ಪಟ್ಟಣದ ರೈಲ್ವೇ ಸ್ಟೇಷನ್ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಎನ್‍ಎಸ್‍ಎಸ್ ಘಟಕ, ಹೊಯ್ಸಳ ಕಾಲೇಜು ಮತ್ತು ಇತರೆ ಸಂಸ್ಥೆಗಳ ಸಹಯೋಗದಲ್ಲಿ ಇಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಇತರೆ ಕಾರ್ಯಕ್ರಮಗಳನ್ನು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು ಎಡಿಇಎನ್ ಹರಿರಾಂ ಮೀನಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಸ್ವಾತಂತ್ರ್ಯದ 75 ವಾರ್ಷಿಕೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಇಂದು ಬೆಳಿಗ್ಗೆ 7 ಗಂಟೆಗೆ ಆಯೋಜಿಸಲಾಗಿದ್ದ ‘ಏಕತೆಗಾಗಿ ಓಟ’ ಕಾರ್ಯಕ್ರಮಕ್ಕೆ ಸಹ ಅವರು ಚಾಲನೆ ನೀಡಿದರು. ಬೆಳಿಗ್ಗೆ 9 ಗಂಟೆಗೆ ಕುವೆಂಪು ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಸಂಯೋಜಕ ಡಾ.ನಾಗರಾಜ್ ಪರಿಸರ, ಹೊಯ್ಸಳ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಲಿಯಂ ಡಿಸೋಜಾ, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾಗೂ ಬೆಳಿಗ್ಗೆ 9.30 ರಿಂದ 10.30 ರವರೆಗೆ ರೈಲ್ವೇ ಸ್ಟೇಷನ್ ಮತ್ತು ಆವರಣದಲ್ಲಿ ಸ್ವಚ್ಚತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಎಲ್ಲರೂ ಕೂಡಿ ಸ್ವಚ್ಚತೆ ಕಾರ್ಯಕ್ರಮ ನಡೆಸಿಕೊಟ್ಟರು.
ಈ ವೇಳೆ ರೈಲ್ವೇ, ಆರ್‍ಪಿಎಫ್ ಅಧಿಕಾರಿ/ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
(ಫೋಟೊ ಇದೆ)
Leave a Comment