ಕಲ್ಲಹಳ್ಳಿ ಗ್ರಾಮದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಭದ್ರಾವತಿ: ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಅಶಯದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಮತ್ತು ಗಿಡ ನಾಟಿ ಕಾರ್ಯಕ್ರಮವನ್ನು ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನೆರವೇರಿಸಲಾಯಿತು.
         ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೇದೇಶರವರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃಧ್ಧಿ  ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ರವರು ಭಾಗವಹಿಸಿ ಪರಿಸರ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.  ಗ್ರಾಮ ಪಂಚಾಯಿತಿ ಸದಸ್ಯರಾದ ಧನಂಜಯ, ಶ್ರೀಮತಿ ಸಾವಿತ್ರಿ ಹಾಗೂ ಶ್ರೀಮತಿ ಶೋಭಬಾಯಿ ಉಪಸ್ಥಿತರಿದ್ದರು. 
      ಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ತಾಲ್ಲೂಕು ಕೃಷಿ ಅಧಿಕಾರಿಯಾದ ಗೋವಿಂದಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ - ಮೇಲ್ವಿಚಾರಕರಾದ ಪ್ರದೀಪ್, ಸೇವಾ ಪ್ರತಿನಿಧಿ ಗಳಾದ, ಪ್ರಭಾವತಿ, ಮಂಜುಳ, ಲತಾ ಮತ್ತು ಕಲ್ಲಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.