ಉಚಿತ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆಗೆ ಇಂದು ಜಿಲ್ಲಾಧಿಕಾರಿಗಳಿಂದ ಚಾಲನೆ



  ಶಿವಮೊಗ್ಗ:  ಉಚಿತ ಕೋವಿಡ್-19 ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು ಶಿವಮೊಗ್ಗದಲ್ಲೂ ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಗೂ ಉಚಿತ ಲಸಿಕೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ಒಟ್ಟು 75 ದಿನಗಳ ಕಾಲ ಉಚಿತವಾಗಿ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ ಇಂದು ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಮ್ಸ್ ಭೋಧನಾ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿಗಳಾದ ಸೆಲ್ವಮಣಿರವರು ಕಾರ್ಯಕ್ರಮ ಉದ್ಘಾಟಿಸಿ ಬೂಸ್ಟರ್ ಲಸಿಕೆಗೆ ಚಾಲನೆ ನೀಡಿದರು.

75ನೇ ಆಜಾದಿಕೀ ಅಮೃತ ಮಹೋತ್ಸವ ಅಂಗವಾಗಿ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ನಾಳೆಯಿಂದ ಸೆಪ್ಟಂಬರ್ 30 ರವರೆಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.‌

ಜಿಲ್ಲೆಯಲ್ಲಿ ಒಟ್ಟು 986909 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಲಭ್ಯವಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದರು.
 ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ,ಸಿಮ್ಸ್ ಸೂಪರಿಂಟೆಂಡೆಂಟ್ ಶ್ರೀಧರ್  ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.