ಶಿವಮೊಗ್ಗ ಲಕ್ಕಿನಕೊಪ್ಪದ ಬಳಿ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ:ಲಕ್ಕಿನಕೊಪ್ಪದ ಬಳಿ ತೋಟದ ಕೆರೆಯಲ್ಲಿ ಖಾಸಗಿ ಕೆಕೆಬಿ‌ ಅನ್‌ಪೂರ್ಣೇಶ್ವರಿ ಬಸ್ ಮತ್ತು ಕೇಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಆಗಿದ್ದು 20‌ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.ಗಾಯಗೊಂಡ ಪ್ರಯಾಣಿಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲುಮಾಡಲಾಗಿದೆ.

ಲಕ್ಕಿನ್ ಕೊಪ್ಪದ ಬಳಿ ತೋಟದ ಕೆರೆಯಲ್ಲಿ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ ಆರ್ಟಿ ಸಿ ಬಸ್ ಗೆ ಶಿವಮೊಗ್ಗದಿಂದ ಹೊರನಾಡಿಗೆ ಹೋಗುತ್ತಿದ್ದ ಕೆಕೆಬಿ ಅನ್ನಪೂರ್ಣ ಬಸ್ ಡಿಕ್ಕಿ ಹೊಡೆದಿದೆ.

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸುಮಾರು 42 ಪ್ರಯಾಣಿಕರಿದ್ದು ಇದರಲ್ಲಿ ಚಾಲಕ ಮಲ್ಲೇಶ್ ಮತ್ತು‌ನಿರ್ವಾಹಕ ಪ್ರಸನ್ನ ಕುಮಾರ್ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರನ್ನ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಯಾವುದೇ ಸಾವುಗಳಾಗಿಲ್ಲ.

ಕೆಕೆಬಿ ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು ಖಾಸಗಿ ಬಸ್ ಚಾಲಕ ಮೆಗ್ಗಾನ್ ಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್ ನಲ್ಲೂ 30‌ಕ್ಕೂ ಅಧಿಕ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ.

ತುಂಗಾನಗರ ಪೊಲೀಸರು ಸ್ಥಳಕ್ಕೆಭೇಟಿ ನೀಡಿದ್ದಾರೆ.ಮುಖಾಮುಖಿ ಡಿಕ್ಕಿಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ನ ಮುಂಭಾಗ ನುಜ್ಜುಗುಜ್ಜಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.