ಬ್ರಹ್ಮಶ್ರೀ ನಾರಾಯಣ ಗುರು ಸಮಾಜಕ್ಕೆ ಈಡಿಗರ ಅಭಿವೃದ್ಧಿ ನಿಗಮ ರಚಿಸಬೇಕು : ಶ್ರೀರೇಣುಕಾನಂದ ಸ್ವಾಮೀಜಿ

ಶಿವಮೊಗ್ಗ: ನಮ್ಮ ಸಮಾಜಕ್ಕೆ ಬ್ರಹ್ಮಶ್ರೀ ನಾರಾಯಣ ಗುರು(ಈಡಿಗರ ಅಭಿವೃದ್ಧಿ ನಿಗಮ) ನಿಗಮ ರಚಿಸಬೇಕು ಎಂದು ಶ್ರೀರೇಣುಕಾನಂದ ಸ್ವಾಮೀಜಿ ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಡಿಗ ಸಮಾಜ ಈಡಿಗ, ಬಿಲ್ಲವ, ನಾಮಧಾರಿ ಮುಂತಾದ 26 ಪಂಗಡಗಳನ್ನು ಹೊಂದಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಹಿಂದೆ ಉಳಿದಿದೆ. ಈ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಲು ಹಲವು ವರ್ಷಗಳಿಂದ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ ಬಂದಿದ್ದೇವೆ. ಆದರೆ, ಇದುವರೆಗೂ ಸರ್ಕಾರ ಪ್ರತ್ಯೇಕ ನಿಗಮ ರಚಿಸದೇ ನಮ್ಮ ಸಮಾಜವನ್ನು ನಿರ್ಲಕ್ಷ್ಯದಿಂದ ಕಾಣುತ್ತಿದೆ. ಯಾವುದೇ ಪ್ರಯೋಜನವಿಲ್ಲದ 5 ವಸತಿ ಶಾಲೆಗಳಿಗೆ ಶ್ರೀ ನಾರಾಯಣಗುರುಗಳ ಹೆಸರನ್ನಿಟ್ಟು ಸಮಾಜಕ್ಕೆ ಭಾರಿ ಕೊಡುಗೆ ನೀಡಿದ ಹಾಗೇ ಸರ್ಕಾರ ಹಾಗೂ ಸಚಿವರು ಪ್ರಚಾರ ಪಡೆಯುತ್ತಿದ್ದಾರೆ ಎಂದು ದೂರಿದರು.
ನಮ್ಮ ಸಮಾಜದ ಮೇಲೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ತಕ್ಷಣವೇ ಈಡಿಗರ ಅಭಿವೃದ್ಧಿ ನಿಗಮ ರಚಿಸಬೇಕು. ಅದಕ್ಕೆ 500 ಕೋಟಿ ರೂ. ಅನುದಾನ ನೀಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನಚರಿತ್ರೆಯನ್ನು ಹಿಂದೆ ಇದ್ದಂತೆ 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು.   
ಪತ್ರಿಕಾಗೋಷ್ಠಿಯಲ್ಲಿ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಪ್ರವೀಣ್ ಹಿರೇ ಇಡಗೋಡು, ರಾಜ್ಯ ಕಾರ್ಯಾಧ್ಯಕ್ಷ ಮುಡುಬ ರಾಘವೇಂದ್ರ, ಪ್ರಮುಖರಾದ ಕೆ.ಎಲ್. ಉಮೇಶ್, ಲೋಕೇಶ್, ಲಿಂಗೇಶ್, ಶಿವಮೂರ್ತಿ, ಪುನೀತ್ ಬೆಳ್ಳೂರು ಮೊದಲಾದವರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.