ಶಿವಮೊಗ್ಗದಲ್ಲಿ ಐಸಿಸ್ ಸಂಘಟನೆ ಜೊತೆಗೆ ನಂಟು ಹೊಂದಿರುವ ಇಬ್ಬರ ಬಂಧನ, ಮತ್ತೊಬ್ಬನಿಗೆ ಶೋಧ

ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಮೂವರ ಮೇಲೆ ಕೇಸು ದಾಖಲಾಗಿದೆ. ಅದರಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಸುದ್ದಿ ಇದೆ.

ಬಂದಿತರಲ್ಲಿ ಒಬ್ಬ ಶಿವಮೊಗ್ಗದ ಸಿದ್ದೇಶ್ವರ ನಗರದ ಯಾಸಿನ್, ಮತ್ತು ಮಂಗಳೂರು ಮೂಲದ ಮಾಜ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಶಂಕಿತ ತೀರ್ಥಹಳ್ಳಿ ಮೂಲದ ಶಾಕಿರ್ ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದ ಸಂದರ್ಭದಲ್ಲಿ ಗಾಂಧೀಬಜಾರಿನ ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತ ಪ್ರಕರಣದ ತನಿಖೆ ವೇಳೆ ಇಂತಹ ಆಘಾತಕಾರಿ ಸುದ್ದಿ ಹೊರಬಂದಿದೆ. ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತದ ಪ್ರಕರಣದ ಅಡಿಯಲ್ಲಿ ತನಿಖೆ ನಡೆಸುತ್ತಿದ್ದಾಗ ಜಬಿವುಲ್ಲಾ ಎಂಬ ವ್ಯಕ್ತಿಯ ಮೊಬೈಲ್ ಶೋಧಿಸುತ್ತಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ಇಬ್ಬರು ಮತ್ತು ತಲೆಮರೆಸಿಕೊಂಡಿರುವ ಒಬ್ಬ ವ್ಯಕ್ತಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.ತನಿಖೆ ಇನ್ನೂ ಮುಂದುವರಿದಿದೆ. ಪೂರ್ಣ ವಿವರ ಲಭ್ಯವಾಗಬೇಕಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.