ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ. 1 ರಂದು *ಕನ್ನಡ ರಾಜ್ಯೋತ್ಸವ*

ಶಿವಮೊಗ್ಗ ಅಕ್ಟೋಬರ್ 31: 
    ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನವೆಂಬರ್ 1 ರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನ ಇಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
    ಧ್ವಜಾರೋಹಣವನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಗೌರವಾನ್ವಿತ ಉಪಸ್ಥಿತಿ ಇರಲಿದೆ.
    ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಅಧಿಕಾರಿಗಳು, ಪಾಲ್ಗೊಳ್ಳುವರು.
     ಬೆಳಿಗ್ಗೆ 8 ಗಂಟೆಗೆ ನಗರದ ಸೈನ್ಸ್ ಕಾಲೇಜು ಮೈದಾನದಿಂದ ಡಿ.ಎ.ಆರ್ ಪೊಲೀಸ್ ಪೆರೇಡ್ ಮೈದಾನದವರೆಗೆ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಬರಲಿದೆ. ಸಂಜೆ 5 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.