*ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಶಿವಮೊಗ್ಗ, ನವೆಂಬರ್ 27 : ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು. ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿತಂತಹ ವಿದ್ಯಾರ್ಥಿಗಳು ಅಭಿವೃದ್ಧಿಯ ಎಲ್ಲ ರಂಗಗಳಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಬಿ ಬ್ಲಾಕ್  ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಅತ್ಯಂತ ಸುಂದರವಾದುದು. ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ತಮ್ಮ ಜವಾಬ್ದಾರಿಗಳನ್ನು ಅರಿತು ಆಟಪಾಠಗಳಲ್ಲಿ ತೊಡಗಿಕೊಳ್ಳಬೇಕು. ಒಮ್ಮೆ ವಿದ್ಯಾರ್ಥಿಯಾದರೆ ಕೊನೆಯವರೆಗೂ ವಿದ್ಯಾರ್ಥಿಯೇ. ವಿದ್ಯಾರ್ಥಿದೆಸೆಯಲ್ಲಿ ಮೊದಲು ಪಾಠ, ನಂತರ ಪರೀಕ್ಷೆ , ಆದರೆ ನಿಜಜೀವನದಲ್ಲಿ ಮೊದಲು ಪರೀಕ್ಷೆ ನಂತರ ಪಾಠ ಕಲಿಯಬೇಕಾಗುತ್ತದೆ. ಎಲ್ಲವನ್ನೂ ಸಕಾರಾತ್ಮಕತೆಯಿಂದ ಸ್ವೀಕರಿಸಬೇಕು. ಮಲೆನಾಡಿನ ಮಕ್ಕಳು ಬಹಳ ಬುದ್ಧಿವಂತರು. ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಮಕ್ಕಳು ಸಿದ್ಧರಾಗಬೇಕು. ಯಾಕೆ, ಏನು, ಎಷ್ಟು, ಎಲ್ಲಿ ಎಂಬ ಪ್ರಶ್ನೆಗಳನ್ನು ಹಾಕುವ ಮೂಲಕ ತಾರ್ಕಿಕ ಚಿಂತನೆಯನ್ನು ಮಾಡಬೇಕುಜ್ಞಾನ ಮತ್ತು ಧ್ಯಾನ  ಇವೆರಡು ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಇವುಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ  ನಾರಾಯಣಗೌಡ, ಸಚಿವರಾದ ಗೋವಿಂದ ಕಾರಜೋಳ,  ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, , ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.