ಸಾಗರ : ಸಾಲದ ಬಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ
ಸಾಗರ : ಸಾಲದ ಬಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತ ರೈತನನ್ನು ಇರುವಕ್ಕಿ ಗ್ರಾಮದ 64ವರ್ಷದ ರಾಮಪ್ಪ ಎಂದು ಗುರುತಿಸಲಾಗಿದೆ.
ರೈತ ರಾಮಪ್ಪ ಕೃಷಿ ಗಾಗಿ, ಸಾಗರ ತಾಲೂಕಿನ ನಂದಿತಳೆ ಪಿಎಲ್ ಬ್ಯಾಂಕ್ ಮತ್ತು ಆನಂದಪುರದ ಡಿಸಿಸಿ ಬ್ಯಾಂಕಿನಲ್ಲಿ ಬೆಳೆ ಸಾಲ ಹಾಗೂ ಅವರ ಪತ್ನಿ ಸಂಘ ಸಂಸ್ಥೆಗಳಲ್ಲಿ ಸಾಲ ಮಾಡಿಕೊಂಡಿದ್ದರು.
ಒಂದು ಎಕರೆ 27 ಗುಂಟೆ ಜಮೀನಿನಲ್ಲಿ ಬೆಳೆಗಾಗಿ ಸಾಲಮಾಡಿದ್ದರು.
ಬೆಳೆಯಲ್ಲಿ ಸರಿಯಾದ ಫಸಲು ಬಾರದ ಕಾರಣ ರೈತ ರಾಮಪ್ಪ
ಮನನೊಂದು ವಿಷ ಸೇವಿಸಿದ್ದರು. ಚಿಕಿತ್ಸೆ ಫಲಿಸದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟರು.
ಘಟನೆ ಕುರಿತು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Leave a Comment