*ಸಂವಿಧಾನದ ಪೀಠಿಕೆ ಅನುಸಾರ ದೇಶ ಕಟ್ಟಬೇಕು : ನ್ಯಾ.ಮಲ್ಲಿಕಾರ್ಜುನ ಗೌಡ*

ಶಿವಮೊಗ್ಗ ನವೆಂಬರ್ 26 : ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ್ದು, ಇಲ್ಲಿ ಸಂವಿಧಾನವು ಬಹಳ ಪ್ರಾಮುಖ್ಯತೆಯನ್ನು ಪಡೆದಿದ್ದು, ಸಂವಿಧಾನದ ಪೀಠಿಕೆ ಅನುಸಾರ ದೇಶ ಕಟ್ಟಬೇಕೆಂದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅಭಿಪ್ರಾಯಪಟ್ಟರು.
     ಜಿಲ್ಲಾಡಳಿತÀ ಶಿವಮೊಗ್ಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ, ನೆಹರು ಯುವ ಕೇಂದ್ರ ಶಿವಮೊಗ್ಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಂವಿಧಾನದ ರಚನೆ ಬಹಳ ವಿಶಿಷ್ಟವಾದ ಇತಿಹಾಸವನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬರಿಗೂ ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯ ವನ್ನು ನೀಡಿದೆ. ಆದರೆ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಇಂದು ಸಂವಿಧಾನದ ಪೀಠಿಕೆಯಲ್ಲಿನ ಸ್ವಾತಂತ್ರ್ಯಗಳ ದುರ್ಬಳಕೆಯಾಗುತ್ತಿದೆ ಎಂದು ವಿμÁಧಿಸಿದರು.
      ಸಂವಿಧಾನ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳÀ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.  ದೇಶದಲ್ಲಿ ಭ್ರಾತೃತ್ವವನ್ನು ಬೆಳೆಸಲು ಕೇವಲ ಕಾನೂನುಗಳಿಂದ ಮಾತ್ರ ಸಾಧ್ಯವಿಲ್ಲ. ದೇಶ ಪರಿವರ್ತನೆಗೆ ಅವುಗಳ ಪಾಲನೆ ಮತ್ತು ಆಚರಣೆ ಅತಿ ಅವಶ್ಯಕ. ಸಂವಿಧಾನದ ಸಮಗ್ರ ಪರಿಪಾಲನೆಯಿಂದ ಗಾಂಧೀಜಿಯವರ ಕನಸಿನ ಭಾರತವನ್ನು ನಿರ್ಮಿಸುವುದು ಕಷ್ಟವೇನಲ್ಲ. ಇದಕ್ಕಾಗಿ ದೇಶದ ಯುವಜನರು ಭ್ರಾತೃತ್ವ ಭಾವನೆ ಬೆಳೆಸಿಕೊಂಡು ಸಂವಿಧಾನದ ಪೀಠಿಕೆಯ ಅನುಸಾರವಾಗಿ ದೇಶವನ್ನು ಕಟ್ಟಬೇಕು ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಅವರು ಕಾರ್ಯಕ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಮಾತನಾಡಿ, ಭಾರತದ ಭವಿಷ್ಯವು ಸಂವಿಧಾನದ ಮೇಲೆ ನಿಂತಿದೆ. ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ತಿಳುವಳಿಕೆ ಅಗತ್ಯ. ಭಾರತದ ಸಂವಿಧಾನವು ಹಲವಾರು ಮಹನೀಯರು ತಮ್ಮ ಜ್ಞಾನ, ಸಮಯ ಮತ್ತು ಅನುಭವಗಳಿಂದ ನೀಡಿದ ಕೊಡುಗೆಯಾಗಿದೆ. ಸಂವಿಧಾನದ ಅಧ್ಯಯನಕ್ಕಾಗಿ  ಹಲವು ಪುಸ್ತಕಗಳು ಲಭ್ಯವಿದ್ದು ಯುವ ಜನತೆ ಅವುಗಳನ್ನು ಓದಬೇಕು ಎಂದು ಸಲಹೆ ನೀಡಿದರು.
     ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ  ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪೆÇ್ರ. ಡಾ. ಸದಾನಂದ ಭಾರತದ ಸಂವಿಧಾನದ ರಚನೆ ಹಾಗೂ ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.
     ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್,  ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ, ನೆಹರು ಯುವ ಕೆಂದ್ರ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ. ಟಿ.ಕೆ., ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜುಗಳ ಎನ್ ಎಸ್ ಎಸ್ ವಿಧ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.