ಶೀಘ್ರ ಕ್ರೀಡಾ ಸಂಕಿರ್ಣದ ಕೆಲಸವನ್ನು ಶಿವಮೊಗ್ಗದಲ್ಲಿ ಪ್ರಾರಂಭಿಸುತ್ತೇವೆ : ಬಿ.ವೈ ರಾಘವೇಂದ್ರ

ಶಿವಮೊಗ್ಗ : ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕ್ರೀಡಾಪಟುಗಳಿಗೆ ಮೂಲಭೂತ ಸೌಕರ್ಯ ನೀಡಬೇಕೆಂಬ ಅಪೇಕ್ಷೆ ಇದೆ. ಈ ನಿಟ್ಟಿನಲ್ಲಿ ಕೃಷಿ ಕಾಲೇಜಿನ ಪಕ್ಕದಲ್ಲಿ ಸುಮಾರು 25 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರದಿಂದ ಸುಮಾರು 100 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಮಟ್ಟದ 'ಸ್ಪೋರ್ಟ್ಸ್ ಕಾoಪ್ಲೆಕ್ಸ್' ಕೆಲಸವನ್ನು ಶೀಘ್ರ ಪ್ರಾರಂಭಿಸುತ್ತೇವೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂಡಿಯನ್ ಒಲಂಪಿಕ್ಸ್ ಮೊದಲ ಮಹಿಳಾ ಅಧ್ಯಕ್ಷರಾಗಿ ಚಿನ್ನದ ರಾಣಿ ಪಿ ಟಿ ಉಷಾ ಅವರನ್ನು ಆಯ್ಕೆ ಮಾಡಿದ್ದಾರೆ,ಈ ವರ್ಷ 124 ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ, 2036ರಲ್ಲಿ ಭಾರತ ದೇಶ ಒಲಂಪಿಕ್ಸ್ ಕ್ರೀಡಾಕೂಟದ ಆಯೋಜನೆ ಮಾಡಲಿರುವುದು ದೇಶದ ಸ್ಪರ್ಧಾರ್ತಿಗಳಿಗೆ ಸ್ಫೂರ್ತಿಯಾಗಲಿದೆ ಎಂದರು ಸಹ್ಯಾದ್ರಿ ಕಲಾ, ವಿಜ್ಞಾನ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ '35ನೇ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ 2022-23 ದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಾಗಿಸಿ ಮಾತನಾಡಿ, ವಿಜೇತ ಕ್ರೀಡಾ ಪಟುಗಳಿಗೆ ಪ್ರಶಸ್ತಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಜಿ, ಧನಂಜಯ, ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎನ್.ಡಿ, ವಿರೂಪಾಕ್ಷ, ಡಾ. ಎಂ.ಕೆ. ವೀಣಾ, ಗಿರೀಶ್ ಕಾರಂತ್, ಸಿಂಡಿಕೆಟ್ ಸದಸ್ಯರಾದ ಬಳ್ಳೆಕೆರೆ ಸಂತೋಷ್, ಎಸ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.