ಹೊಸ ವರ್ಷ ಆಚರಣೆ ಸಂಬಂಧ *ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರ ಸಭೆ- ಪೋಲೀಸ್ ಇಲಾಖೆಯಿಂದ ಕೆಲವು ಸೂಚನೆ

ಶಿವಮೊಗ್ಗ:  ಈ ದಿನ ದಿನಾಂಕಃ-28-12-2022 ರಂದು ಬೆಳಗ್ಗೆ 11:00 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ *ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗರವರು* ಮುಂಬರುವ ಹೊಸ ವರ್ಷ ಆಚರಣೆಯ  ಸಂಬಂಧ *ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು* ನಡೆಸಿ, ಈ ಕೆಳಕಂಡ ಸೂಚನೆಗಳನ್ನು ನೀಡಿದರು.1) ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು *ಬೆಳಗಿನ ಜಾವ 01:00 ಗಂಟೆಯ* ಒಳಗಾಗಿ ಮುಕ್ತಾಯಗೊಳಿಸುವುದು. 

2) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ *ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ* ಕ್ರಮಗಳನ್ನು ಕೈಗೊಳ್ಳುವುದು. 

3) ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ  *ಮಾದಕ ವಸ್ತುಗಳನ್ನು* ಬಳಸಬಾರದು.

4) ಮಧ್ಯ ಮಾರಾಟವನ್ನು *ರಾತ್ರಿ 11:30 ರ ವರೆಗೆ* ಮಾತ್ರ ಮಾಡುವುದು.

5) *ಮಧ್ಯಪಾನ ಮಾಡಿ ವಾಹನವನ್ನು ಚಾಲನೆ* ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು. 

6) ನಿಗದಿ ಪಡಿಸಿದ *ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ* ಗಳನ್ನು ಬಳಸುವಂತಿಲ್ಲ.

7) ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.

8) ಗುಂಪನ್ನು ನಿಯಂತ್ರಿಸುವ ಸಂಬಂಧ *ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು* ನಿರ್ಮಿಸುವುದು.

9) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ *ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್* ಅನ್ನು ಬಳಸುವುದು.

10) *60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು* ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.

11) *ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್* ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು. 

12) ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ *ಥರ್ಮಲ್ ಸ್ರ್ಕೀನಿಂಗ್ ಗೆ* ಒಳಪಡಿಸುವುದು. 

13) ಯಾವುದೇ *ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ* ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: 9480803300 / 08182-261413 ಅಥವಾ ತುರ್ತು ಸಹಾಯವಾಣಿ  112 ಗೆ ಕರೆ ಮಾಡುವುದು.

ಈ ಸಂದರ್ಭದಲ್ಲಿ *ಡಿವೈಎಸ್.ಪಿ ಡಿಸಿಆರ್.ಬಿ ಮತ್ತು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು* ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.