ರಾಜ್ಯದ ವಿದ್ಯಾರ್ಥಿಗಳ ಹಲವಾರು ಸಮಸ್ಯೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು; ಎವಿವಿಪಿ ಪ್ರತಿಭಟನೆ ಆಗ್ರಹ

ಶಿವಮೊಗ್ಗ: ರಾಜ್ಯದ ವಿದ್ಯಾರ್ಥಿಗಳು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರದಿಂದ ಪ್ರತಿ ವರ್ಷ ನೀಡುವ ವಿದ್ಯಾರ್ಥಿ ವೇತನದ ಕಳೆದ ಸಾಲಿನ ಹಣ ಇನ್ನೂ ಹಲವಾರು ವಿದ್ಯಾರ್ಥಿಗಳಿಗೆ ಬಂದಿಲ್ಲ. ಈ ವರ್ಷದ ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ದಿನಾಂಕವನ್ನು ಸಹ ವಿಸ್ತರಿಸಬೇಕಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಸ್ಟೆಲ್ಗಳಿಗೆ ಸೇರಬೇಕಾದ ವಿದ್ಯಾರ್ಥಿಗಳಿಗೆ ಹೋಲಿಸಿದಲ್ಲಿ ಹಾಸ್ಟೆಲ್‌ಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆ.

ಈ ನಿಟ್ಟಿನಲ್ಲಿ ಹಲವಾರು ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಆ ಕಾರಣ ಹಾಸ್ಟೆಲ್‌ಗಳ ಸಂಖ್ಯೆಯನ್ನು ಸಹ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಸಂಘಟನೆಯವರು, ಹಲವಾರು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಆಗಿಲ್ಲ. ಹಲವಾರು ಬಸ್ ನ ಮಾರ್ಗಗಳನ್ನು ಸಹ ಕಡಿತಗೊಳಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಈ ಎಲ್ಲಾ ವಿಷಯಗಳ ಬಗ್ಗೆ ಗಮನ ಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾಗಿದೆ ಇಲ್ಲದಿದ್ದಲ್ಲಿ ವಿದ್ಯಾರ್ಥಿ ಪರಿಷತ್ ಉಗ್ರ ಹೋರಾಟ ನಡೆಸಲಿದೆ ಎಂದಿದ್ದಾರೆ. 

ವಿ.ಟಿ.ಯು ಎ.ಎ ಯು ಕಾನೂನು ಬದ್ಧವಾಗಿ ಶೇ. 10 ಶುಲ್ಕವನ್ನು ಏರಿಕೆ ಮಾಡಬೇಕಾಗಿತ್ತು, ಆದರೆ ಯಾವುದೇ ಪರಿಮಿತಿಯನ್ನು ಅನುಸರಿಸದೆ ವಿ.ವಿ ಯು ಶುಲ್ಕವನ್ನು ಏರಿಕೆ ಮಾಡಿರುತ್ತದೆ ವಿ.ವಿ ಯ ಈ ನಡೆಯನ್ನು ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ ಎಂದಿದ್ದಾರೆ.

ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು 25 %, ಅಂಕಪಟ್ಟಿ ಶುಲ್ಕವನ್ನು 100 %, ಡಿಗ್ರಿ ಸರ್ಟಿಫಿಕೇಟ್ ನೀಡಲು 50 %ಶುಲ್ಕ ಏರಿಕೆ ಮಾಡಿದೆ. ಈ ರೀತಿಯಾಗಿ ಎಲ್ಲಾ ವಿಭಾಗದ ನೂತನವಾದ ಶುಲ್ಕ ಪಟ್ಟಿಯನ್ನು ವಿ.ವಿ ಯು ಹೊರಡಿಸಿದ್ದು , ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕಾನೂನು ಬದ್ಧವಲ್ಲದ ಈ ರೀತಿಯ ಶುಲ್ಕ ಏರಿಕೆಯನ್ನು ಎಬಿವಿಪಿ ಖಂಡಿಸುತ್ತದೆ ಹಾಗೂ 10 % ಗಿಂತ ಅಧಿಕವಾಗಿ ಏರಿಸಿರುವ ಶುಲ್ಕಗಳನ್ನು ಕೂಡಲೇ ಕಡಿತಗೊಳಿಸಬೇಕು ಎಂದು ಆಗ್ರಹಿಸಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.