ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್ ; ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1 ಲಕ್ಷ ರೂ.ದಂಡ!
ಭದ್ರಾವತಿ :ತಾಲ್ಲೂಕಿನ 19 ವರ್ಷದ ಯುವಕನೊಬ್ಬನು *06 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ* ನೀಡಿರುತ್ತಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಪ್ರಕರಣದಲ್ಲಿ ತನಿಖಾಧಿಕಾರಿಗಳಾದ *ಶ್ರೀ ಲಕ್ಷ್ಮೀಪತಿ, ಪಿಐ, ಹೊಳೆಹೊನ್ನೂರು ಪೊಲೀಸ್ ಠಾಣೆರವರು* ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ *ದೋಷಾರೋಪಣ ಪತ್ರವನ್ನು* ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ *ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್* ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, *The Addl District and Sessions Court, FTSC–II (POCSO) Shivamogga* ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು *ಮಾನ್ಯ ನ್ಯಾಯಾಧೀಶರಾದ ಮೋಹನ ಜೆ. ಎಸ್* ರವರು ದಿನಾಂಕ 06-01-2023 ರಂದು *ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ* ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ *20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,00,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ* ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

Leave a Comment