ಫೆಬ್ರವರಿ 27 ರೋಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಪ್ರದಾನಿ ಮೋದಿಯಿಂದ ಉದ್ಘಾಟನೆ:ಬಿಎಸ್ವೈ

ಶಿವಮೊಗ್ಗ:  ಫೆ. 27 ರ ಒಳಗಾಗಿ ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ದಿನಾಂಕ ಫಿಕ್ಸ್ ಆಗಿಲ್ಲ. ಇನ್ನೂ ನಾಲ್ಕೈದು ದಿನಗಳಲ್ಲಿ ದಿನಾಂಕ ಫಿಕ್ಸ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಹೇಳಿದರು.ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಇಂದು ಸಂಜೆ ಬೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಮಾತನಾಡಿದರು.ಪ್ರಧಾನಿಯವರು ಒಂದು ದಿನ ಸಮಯ ನೀಡಬಹುದು. 95 ಪರ್ಸೆಂಟ್ ವರ್ಕ್ ಮುಗಿದಿದೆ. ಕೆಲವೊಂದು ಕ್ಲಿಯರೆನ್ಸ್ ಸಿಗಬೇಕಿದೆ. ಅದರ ಬಗ್ಗೆ ಪ್ರದಾನಿ ಮೋದಿಯವರ ಹತ್ತಿರ ಮಾತನಾಡಿದ್ದೇವೆ. ಅದು ಸಹ ಆಗಲಿದೆ ಎಂದಿದ್ಧಾರೆ.ಪ್ರಧಾನಿ ನರೇಂದ್ರ ಮೋದಿಯವರು ಸುಮಾರು ಒಂದು ಗಂಟೆಗಳ ಕಾಲ ನಮಗೆ ಮಾರ್ಗದರ್ಶನ ನೀಡಿದರು.ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು ಎರಡು ದಿವಸ ಬಹಳ ಒಳ್ಳೆಯ ಸಭೆ ಆಯ್ತು. ದೇಶದ ಮುಂದಿನ ಮುಂದಿನ ಪರಿಸ್ಥಿತಿಗಳೇನು ಹಾಗೂ ಮುಂದಿನ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು .  ಬಹಳ ಉತ್ಸಾಹದಿಂದ ನಾವೆಲ್ಲರೂ ವಾಪಸ್ ಬಂದಿದ್ದೇವೆ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.140 ಕ್ಕೂ ಹೆಚ್ಚು ಕ್ಷೇತ್ರ 
ಅಲ್ಲದೆ ರಾಜ್ಯದಲ್ಲಿ ಪಕ್ಷದ ಗೆಲುವಿಗಾಗಿ ಮೋದಿಜಿ ಅವರು ಹಾಗೂ ಅಮಿತ್ ಶಾ ಅವರು ಹೆಚ್ಚಿನ ಸಮಯವನ್ನು ಕೊಡುತ್ತಾರೆ, ಅವರುಗಳ ಸಮಯವನ್ನ ಸದುಪಯೋಗಪಡಿಸಿಕೊಂಡು 140 ಕ್ಕೂ ಹೆಚ್ಚು ಸ್ಥಾನವನ್ನುಗೆದ್ದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ತರುತ್ತೇವೆ ಎಂದು ಭರವಸೆಯನ್ನು ಕೊಟ್ಟು ಬಂದಿದ್ದೇವೆ, ಆ ವಿಶ್ವಾಸವೂ ನನಗಿದೆ ಎಂದರು. 
ಸ್ಥಳೀಯ ಕಾರ್ಯಕರ್ತರು ಹಾಗೂ ಶಾಸಕರು ಹೆಚ್ಚಿನ ಕೆಲಸ ಮಾಡಬೇಕು ಎಂದು ಮೋದಿಯವರು ಸಲಹೆ ಕೊಟ್ಟಿದ್ದು,  ಮನೆ ಮನೆಗೆ ಕಾರ್ಯಕರ್ತರು ಭೇಟಿ ಮಾಡಬೇಕು ಎನ್ನುವ   ಸಲಹೆಯನ್ನ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಈಗಾಗಲೇ ನಾವು ಕೆಲಸವನ್ನು ಪ್ರಾರಂಭಿಸಿದ್ದೇವೆ ಎಂದರು. ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಆಯನೂರ್ ಮಂಜುನಾಥ್, ಎಸ್ ರುದ್ರೇಗೌಡ್ರು, ಪ್ರಮುಖರಾದ ಎಸ್.ದತ್ತಾತ್ರಿ, ಜಗದೀಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.