*ಪರೀಕ್ಷಾ ಪೆ ಚರ್ಚಾ ಕುರಿತು ಚಿತ್ರಕಲೆ ಸ್ಪರ್ಧೆ*

ಶಿವಮೊಗ್ಗ, ಜನವರಿ.24 : 
   ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ ಅಂಶಗಳ ಕುರಿತು ಜ.23 ರಂದು ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದಲ್ಲಿ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ನಡೆಸಲಾಯಿತು.
    ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ, ಪರೀಕ್ಷಾ ಪೇ ಚರ್ಚಾ 2023 ರ ಅಂಗವಾಗಿ ಕೇಂದ್ರೀಯ ವಿದ್ಯಾಲಯ ನವದೆಹಲಿ ಮತ್ತು ಕೆವಿಎಸ್ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತು ಕೇಂದ್ರೀಯ ವಿದ್ಯಾಲಯ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ನಗರದ 07 ಸಿಬಿಎಸ್‍ಇ 80 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
      ಅತ್ಯುತ್ತಮವಾಗಿ ಚಿತ್ರ ರಚಿಸಿದ 05 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನಗಳನ್ನು ನೀಡಲಾಯಿತು ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಡಿಜಿಟಲ್ ಪ್ರಮಾಣಪತ್ರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬರೆದ "ಪರೀಕ್ಷಾ ಯೋಧರು" ಪುಸ್ತಕವನ್ನು ನೀಡಿ ಗೌರವಿಸಲಾಯಿತು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.