ಹುಣಸೂಡು ಸ್ಫೋಟದಿಂದ ಹಾನಿಗೊಳಗಾದ ಮನೆಗಳ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಶಿವಮೊಗ್ಗ:ಹುಣಸೂಡು ಸ್ಫೋಟದಿಂದ ಹಾನಿಗೊಳಗಾದ ಮನೆಗಳ ಸಂತ್ರಸ್ತರಿಗೆ ಕೂಡಲೇ 
ಪರಿಹಾರ ನೀಡುವಂತೆ ಒತ್ತಾಯಿಸಿ  ಕರ್ನಾಟಕ ನವ ನಿರ್ಮಾಣ ವೇದಿಕೆ ರಾಜ್ಯಾದ್ಯಕ್ಷ ಗೋ. ರಮೇಶ್ ಗೌಡ ನೇತ್ರತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದ ಎದುರು  ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ: 21-01-2021 ರ ರಾತ್ರಿ 10.20 ರ ಸುಮಾರಿಗೆ ಕಲ್ಲುಕ್ವಾರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಬಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು, ಸ್ಪೋಟಗೊಂಡು ಶಿವಮೊಗ್ಗ ಜಿಲ್ಲೆಯಾದ್ಯಂತ ಭೂಕಂಪನ ಉಂಟಾಗಿದ್ದು, ಜಲ್ಲಿ ಕ್ರಶರ್ ಮತ್ತು ಕಲ್ಲು ಕ್ವಾರೆಗಳ ಸಮೀಪದಲ್ಲೇ ಇರುವ ಸುತ್ತಮುತ್ತಲಿನ ಗ್ರಾಮಗಳಾದ ಗೆಜೇನಹಳ್ಳಿ, ಹನುಮಂತ ನಗರ, ಹುಣಸೋಡು, ಅಬ್ಬಲಗೆರೆ, ಬಸವನ ಗಂಗೂರು, ಚನ್ನಮುಂಭಾಮರ, ಬೊಮ್ಮನಕಟ್ಟಿ, ಕಲ್ಲಗಂಗೂರು ಸೇರಿದಂತೆ ಸುತ್ತಮುತ್ತಲ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕೆಲ ಮನೆಗಳ ಚಾವಣಿ ಹಾಳಾಗಿದ್ದು, ಮತ್ತೆ ಕೆಲವು ಮನೆಗಳ ಟಿ.ವಿ, ಎಲೆಕ್ಟ್ರಾನಿಕ್ ಉಪಕರಣಗಳು ಸ್ಫೋಟದಿಂದ ಹಾನಿಗೊಳಗಾಗಿದ್ದು, ಜಿಲ್ಲಾಡಳಿತದ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ಲಕ್ಯದಿಂದ ತಮ್ಮದಲ್ಲದ ತಪ್ಪಿನಿಂದ ನೂರಾರು ಗ್ರಾಮಸ್ಥರು ಲಕ್ಷಾಂತರ ರೂಪಾಯಿಗಳ ನಷ್ಟ ಅನುಭವಿಸುವಂತಾಗಿದ್ದು, ಸುಮಾರು 850 ಸಂತಸ್ತರು ಪರಿಹಾರ ನೀಡಲು ಕೋರಿ ಅರ್ಜಿ ಸಲ್ಲಿಸಿದ್ದು, ಜಿಲ್ಲಾ ಪಂಚಾಯತ್ ಇಂಜಿನಿಯರ್‌ ವಿಭಾಗದಿಂದ ಪ್ರತಿ ಮನೆಗಳು ಶೇ. 10 ರಷ್ಟು ಹಾನಿಯಾಗಿರುವುದಾಗಿ ವರದಿ ನೀಡಿದ್ದಾರೆ ಎಂದರು.
ಆದರೆ, ಘಟನೆ ನಡೆದು ಎರಡು ವರ್ಷ ಕಳೆದರೂ ಇಲ್ಲಿಯವರೆಗೂ ಸಂತ್ರಸ್ತರಿಗೆ ಪರಿಹಾರ ನೀಡಿರುವುದಿಲ್ಲ. ಘಟನೆಯಲ್ಲಿ ಕಾಣೆಯಾದವರ ಬಗ್ಗೆ ಇಲ್ಲಿಯವರೆಗೂ ಯಾವುದೇ ಮಾಹಿತಿ ನೀಡಿರುವುದಿಲ್ಲ. ಆದ್ದರಿಂದ ದಯಮಾಡಿ ಕೂಡಲೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು, ಇಂತಹ ದುರ್ಘಟನೆಗೆ ಕಾರಣವಾದ ಮೇಲ್ಕಂಡ ಗ್ರಾಮಗಳ ಸುತ್ತಮುತ್ತಲಿರುವ ಕ್ವಾರೆಗಳನ್ನು, ಕ್ರಶರ್ ಗಳನ್ನು ಮುಚ್ಚಿಸಬೇಕೆಂದು ಒತ್ತಾಯಿಸಿದರು.

   ಈ ಸಂದರ್ಭದಲ್ಲಿ ದೇವೆಂದ್ರಪ್ಪ ಶ್ರೀಮತಿ ನಯನ.ಸಂಚಾಲಕರು ಮ.ಘಟಕ,
ನಾಗರಾಜ್, ರಾಜು ಗುಜ್ಜರ್ ಲೋಕೇಶ, ಹೆಚ್ ಆಸಿಫ್ / ಫಯಾಜ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.