ರಿಪ್ಪನ್‌ಪೇಟೆ ; ಲಕ್ಷಾಂತರ ರೂ. ಬೆಲೆ ಬಾಳುವ ಸಾಗುವಾನಿ ಮರದ ತುಂಡುಗಳು ವಶಕ್ಕೆ

ಹೊಸನಗರ : ಸಾಗರದ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ರಿಪ್ಪನ್‌ಪೇಟೆ ಸಮೀಪದ ಮಳವಳ್ಳಿ ಗ್ರಾಮದಲ್ಲಿ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾಗುವಾನಿ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಳವಳ್ಳಿ ಗ್ರಾಮದ ನಾಗರಾಜ ಎಂಬುವವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ಸೈಜು ಮತ್ತು ದಿಮ್ಮಿಗಳನ್ನು ಜಮೀನಿನಲ್ಲಿ ಸಂಗ್ರಹ ಮಾಡಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರದ ಸೈಜು ಮತ್ತು ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಇವುಗಳನ್ನು ಮೂಗುಡ್ತಿ ವಲಯದ ಅರಣ್ಯ ಅಧಿಕಾರಿಗೆ ಮುಂದಿನ ಕಾನೂನು ಕ್ರಮಕ್ಕೆ ಹಸ್ತಾಂತರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ವಿನಾಯಕ, ಸಿಬ್ಬಂದಿ ದಿನೇಶ, ಗಣೇಶ, ಗಿರೀಶ್, ಮಹೇಶ್ ಇನ್ನಿತರರಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.