ಕಾಲುವೆ ಒತ್ತುವರಿ ಸಮಸ್ಯೆ: ಮಂಡಘಟ್ಟ ಗ್ರಾ.ಪಂ. ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ

ಶಿವಮೊಗ್ಗ: ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ತಾಲ್ಲೂಕಿನ ಮಂಟಘಟ್ಟ ಗ್ರಾಮ ಪಂಚಾಯ್ತಿ ಕಚೇರಿ ಎದುರು ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.ಉಮೇಶ್ ಅವರು ಕಳೆದ ನಾಲ್ಕು ವರ್ಷಗಳಿಂದ ರಾಜ ಕಾಲುವೆ ಒತ್ತುವರಿಯಾಗಿರುವುದರಿಂದ ತಮ್ಮ ಮನೆಗೆ ಮಳೆ ನೀರು ನುಗ್ಗುತ್ತಿದೆ. ಇದರಿಂದ ತಮಗೆ ಪ್ರತಿ ವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ 4 ವರ್ಷಗಳಿಂದಲೂ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. 
ಇದರಿಂದಾಗಿ ಪ್ರತಿ ವರ್ಷ ಮಳೆಗಾಲದಲ್ಲಿ ಏನಾಗುವುದೋ ಎಂಬ ಆತಂಕದಲ್ಲೇ ದಿನ ದೂಡಬೇಕಿದೆ. ಗ್ರಾಮ ಪಂಚಾಯ್ತಿ ಆಡಳಿತದ ನಿರ್ಲಕ್ಷ್ಯದಿಂದಾಗಿ ನಾನು ಮತ್ತು ನನ್ನ ಕುಟುಂಬದವರು ನೊಂದಿದ್ದೇವೆ. ಅನ್ಯಾಯವನ್ನು ಸರಿಪಡಿಸುವಂತೆ ಡಿಸೆಂಬರ್ 26ರಂದು ಉಪವಾಸ ಸತ್ಯಾಗ್ರಹ ಕುಳಿತಿದ್ದಾಗ ತಾಲ್ಲೂಕು ಪಂಚಾಯ್ತಿ ಮುಖ್ಯಾಧಿಕಾರಿ ಅವಿನಾಶ್ ಅವರು ಒಂದು ತಿಂಗಳಲ್ಲಿ ಅವರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ, ಒಂದು ತಿಂಗಳ ಗಡುವು ಮುಗಿದರೂ ಸಮಸ್ಯೆ ಬಗೆಹರಿದಿಲ್ಲ.
ಆದರೆ, ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬದಲು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ ಎಂದು ಉಮೇಶ್ ಆರೋಪಿಸಿದರಲ್ಲದೇ, ಸಮಸ್ಯೆಯನ್ನು ಸರಿಪಡಿಸುವವರೆಗೂ ಉಪವಾಸ ಧರಣಿ ಕೈಬಿಡುವುದಿಲ್ಲ ಎಂದು ತಿಳಿಸಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.