*ಬೀದಿ ನಾಟಕದ ಮೂಲಕ ಬಾಲ-ಕಿಶೋರ ಕಾರ್ಮಿಕ ಕಾಯ್ದೆ ಅರಿವು*
ಶಿವಮೊಗ್ಗ, ಜನವರಿ 19:
ಜ.18 ರಂದು ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಬೀದಿ ನಾಟಕಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಣ್ಣ ಸಂಕಣ್ಣನವರು ಚಾಲನೆ ನೀಡಿದರು.
ಬೀದಿ ನಾಟಕದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾವಸ್ಥೆ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಕಲಂ 3 ರನ್ವಯ 14 ವರ್ಷದೊಳಗಿನ ಬಾಲಕಾರ್ಮಿಕರನ್ನು ಹಾಗೂ ಕಲಂ 3(ಎ)ರನ್ವಯ ಅಪಾಯಕಾರಿ ಉದ್ದಿಮೆ/ಕೈಗಾರಿಕೆಗಳಲ್ಲಿ 18 ವರ್ಷದೊಳಗಿನ ಕಿಶೋರರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ನೇಮಿಸಿಕೊಂಡ ಮಾಲೀಕರ ವಿರುದ್ಧ ನ್ಯಾಯಾಲಯವು ಕನಿಷ್ಠ ರೂ20,000/- ದಿಂದ ಗರಿಷ್ಠ 50,000/- ದವರೆಗೆ ದಂಡವನ್ನುಅಥವಾ 6 ತಿಂಗಳಿನಿಂದ 2ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿ ಅರಿವು ಮೂಡಿಸಲಾಯಿತು
ಉಪ ಕಾರ್ಮಿಕ ಆಯುಕ್ತ ಸೋಮಣ್ಣ, ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ, ಕಾರ್ಮಿಕ ನಿರೀಕ್ಷಕ ಭೀಮೇಶ್ ಹಾಗೂ ಯೋಜನಾ ನಿರ್ದೇಶಕ ರಘುನಾಥ ಹಾಜರಿದ್ದರು.
Leave a Comment