ಫೆ.21ರಂದು ನಗರಕ್ಕೆ ಪಂಚರತ್ನ ಯಾತ್ರೆ : ಯಶಸ್ವಿಗೊಳಿಸಲು ಮನವಿಜೆಡಿಎಸ್ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್

ಭದ್ರಾವತಿ, ಫೆ. ೧೯ : ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಮುಖ 5 ಅಂಶಗಳನ್ನು ಒಳಗೊಂಡ ಪಂಚರತ್ನ ಯಾತ್ರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ  ಸಂಚರಿಸುತ್ತಿದ್ದು, ಫೆ.21ರಂದು ಬೆಳಿಗ್ಗೆ 9 ಗಂಟೆಗೆ ತಾಲೂಕಿಗೆ ಆಗಮಿಸಲಿದೆ ಎಂದು ಜಾತ್ಯತೀತ ಜನತಾದಳ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಸತಿಯ ಆಸರೆ, ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ಯುವ ನವ ಮಾರ್ಗ ಹಾಗು ಮಹಿಳಾ ಸಬಲೀಕರಣ ಮತ್ತು ರೈತ ಚೈತನ್ಯ ಒಟ್ಟು 5 ಪ್ರಮುಖ ಅಂಶಗಳನ್ನು ಪಂಚರತ್ನ ಯಾತ್ರೆ ಒಳಗೊಂಡಿದೆ. ಈಗಾಗಲೇ ಯಾತ್ರೆ ರಾಜ್ಯಾದ್ಯಂತ ಸಂಚರಿಸಿ ರಾಜ್ಯದ ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ. ಇದೀಗ ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ಯಾತ್ರೆ ಸಂಪೂರ್ಣ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.
    ತಾಲೂಕಿನ ಗಡಿಭಾಗ ಕಾರೇಹಳ್ಳಿಗೆ ಆಗಮಿಸಲಿರುವ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಲಾಗುವುದು. ನಂತರ ಯಾತ್ರೆ ಕೆಂಪೇಗೌಡ ನಗರ, ಬಾರಂದೂರು, ಕೆಂಚೇನಹಳ್ಳಿ, ಮಾವಿನಕೆರೆ, ತಾಷ್ಕೆಂಟ್‌ನಗರ, ಯರೇಹಳ್ಳಿ, ಮಾರುತಿನಗರ, ಶಿವನಿಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್ ನಗರ, ಅಂತರಗಂಗೆ, ಕಾಚಗೊಂಡನಹಳ್ಳಿ, ಅಶ್ವಥ್‌ನಗರ, ಶಿವಾಜಿ ವೃತ್ತ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್‌ಬ್ರಿಡ್ಜ್, ಹೊಸ ಸೇತುವೆ, ಕೆಎಸ್‌ಆರ್‌ಟಿಸಿ ಬಸ್ ಡಿಪೋ ವೃತ್ತ, ಕಂಚಿಬಾಗಿಲು ವೃತ್ತ ಮೂಲಕ ಕನಕಮಂಟಪ ಮೈದಾನ ತಲುಪಲಿದೆ. ಸಂಜೆ ೪ ಗಂಟೆಗೆ ಕನಕಮಂಟಪ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್  ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿರುವರು ಎಂದರು.
ವೇದಿಕೆ ಕಾರ್ಯಕ್ರಮ ಮುಕ್ತಾಯಗೊಂಡ ನಂತರ ತಾಲೂಕಿನ ನವುಲೆ ಬಸವಾಪುರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ. ಫೆ.೨೨ರಂದು ತಾಲೂಕಿನ ಸಿ.ಎನ್  ರಸ್ತೆ ಮೂಲಕ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಪ್ರವೇಶಿಸಲಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.

    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಕೆ. ಧರ್ಮಕುಮಾರ್, ಪ್ರಮುಖರಾದ ಮುರ್ತುಜಾಖಾನ್, ಮಧುಸೂಧನ್, ಉಮೇಶ್, ಮೈಲಾರಪ್ಪ, ಲೋಕೇಶ್ವರ್ ರಾವ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.