ಪ್ರಧಾನಮಂತ್ರಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ*ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗ ಅಧಿಸೂಚನೆ*

ಶಿವಮೊಗ್ಗ, ಫೆಬ್ರವರಿ 24:
    ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.
ಶೂನ್ಯ ಸಂಚಾರ ರಸ್ತೆ ಮಾರ್ಗ: 
    ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.
ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ): 
• ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು. 
• ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.
• ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
• ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.
ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ): 
• ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.
• ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
• ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಫೋಟ್ ್ ನಡುವೆ ಗುರುತಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
• ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
• ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏಪ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು
• ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.

ಸಾರಿಗೆ ಸಂಚಾರದಲ್ಲಿ ವ್ಯತ್ಯಯ: ಸಹಕರಿಸುವಂತೆ ಮನವಿ
ಶಿವಮೊಗ್ಗ, ಫೆಬ್ರವರಿ 24, :ಫೆ.27ರಂದು ಭಾರತ ಸರ್ಕಾರದ ಪ್ರಧಾನ ಮಂತ್ರಿಗಳು ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಮಾಡುವುದರಿಂದ ಫೆ. 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಕ.ರಾ.ರ.ಸಾ.ನಿಗಮದ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
            ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಆಗಮಿಸುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 200 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.