ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ನಿಗಧಿ: ಮೇ 10 ರಂದು ಚುನಾವಣೆ-ಮೇ 13 ಕ್ಕೆ ಫಲಿತಾಂಶ

ರಾಜ್ಯದ ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.*ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.*

*"ಮೊದಲ ಹಂತದ ಚುನಾವಣಾ ಪ್ರಕ್ರಿಯೆ ವಿವರ ಹೀಗಿದೆ"*

*"ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: 20 ಏಪ್ರಿಲ್‌"*

*"ನಾಮಪತ್ರ ಪರಿಶೀಲನೆ ಕೊನೆಯ ದಿನ: 23 ಏಪ್ರಿಲ್‌"*

*"ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ: ಏಪ್ರಿಲ್‌ 24"*

*"ಮತದಾನ ನಡೆಯುವ ದಿನಾಂಕ: 10 ಮೇ"*

*"ಮೇ 13 ಕ್ಕೆ ಫಲಿತಾಂಶ"*

*224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 5,21,76,579 ಕೋಟಿ ಮತದಾರರಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,599 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ - 2,62,42,561 ಹಾಗೂ ಮಹಿಳಾ ಮತದಾರರ ಸಂಖ್ಯೆ 2,59,26,319 ಇದೆ. ರಾಜ್ಯದಲ್ಲಿ ಅಂದಾಜು 4,699 ತೃತೀಯ ಲಿಂಗಿಗಳಿದ್ದು, ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ (18+) - 9,17,241ಇದೆ ಒಟ್ಟು ಮತಗಟ್ಟೆಗಳು -58,282 ಇವೆ ಈ ಪೈಕಿ ನಗರ ಪ್ರದೇಶದಲ್ಲಿ 24,063 ಇವೆ. ಮಹಿಳೆಯರಿಂದ ನಿರ್ವಹಣೆ ಮಾಡುವ ಮತಗಟ್ಟೆಗಳ ಸಂಖ್ಯೆ 1320 ಹಾಗೂ ಗ್ರಾಮೀಣ ಭಾಗದಲ್ಲಿ ಇರುವ ಮತಗಟ್ಟೆಗಳು 34,219 ಹಾಗೂ ಮಾದರಿ ಮತಗಟ್ಟೆಗಳ ಸಂಖ್ಯೆ 240 ಇವೆ.*

*ಇದೇ ಮೊದಲ ಬಾರಿಗೆ 80 ವರ್ಷ ಅದಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ.*
*ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯ ಒದಗಿಸಲಾಗುವುದು. ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ. 5.55 ಲಕ್ಷ ಅಂಗವಿಕಲರಿದ್ದು, ಈ ಪೈಕಿ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವರಿಗೆ ಆಯೋಗ ಸೌಲಭ್ಯ ಕಲ್ಪಿಸಲಿದೆ.*


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.