ಬಿಜೆಪಿಯ 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ: 52 ಹೊಸಮುಖಗಳಿಗೆ ಮಣೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ  ಬಿಜೆಪಿ  ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 

52 ಹೊಸ ಮುಖಗಳಿಗೆ ಮಣೆ;
ಪ್ರಸಕ್ತ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್​ ನೀಡಿದೆ. ಒಬಿಸಿಯ 32 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. 8 ಮಂದಿ ಮಹಿಳೆಯರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 9 ಮಂದಿ ವೈದ್ಯರ ಹೆಸರು ಪಟ್ಟಿಯಲ್ಲಿದೆ.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.