*ಮೆಗ್ಗಾನ್ ಆಸ್ಪತ್ರೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿನ್ಯಾ.ಬಿ.ವೀರಪ್ಪ ಅವರಿಂದ ಉದ್ಘಾಟನೆ*

ಶಿವಮೊಗ್ಗ, ಏಪ್ರಿಲ್ 15,  :
     ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನೂತನವಾಗಿ ತೆರೆಯಲಾಗಿರುವ ಪ್ರತ್ಯೇಕ ಚಿಕಿತ್ಸಾ ಕೊಠಡಿಯನ್ನು ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಬಿ.ವೀರಪ್ಪ ಅವರು ಇಂದು ಉದ್ಘಾಟಿಸಿದರು.
   ಈ ವೇಳೆ ಅವರು ಮಾತನಾಡಿ, ನಾನು ಬೇರೆಡೆ ಲಿಂಗತ್ವ ಅಲ್ಪಸಂಖ್ಯಾತರಿಗೆಂದೇ ಪ್ರತ್ಯೇಕವಾದ ಚಿಕಿತ್ಸಾ ಮತ್ತು ತಪಾಸಣಾ ಕೊಠಡಿ ನೋಡಿಲ್ಲ. ಇದೇ ಮೊದಲ ಈ ರೀತಿಯ ಕೇಂದ್ರವಾಗಿದ್ದು ಲಿಂಗತ್ವ ಅಲ್ಪಸಂಖ್ಯಾತರು ಇದರ ಬಳಕೆ ಮಾಡಿಕೊಳ್ಳಬೇಕು. ವೈದ್ಯರೂ ಸಹ ಮುತುವರ್ಜಿ ಮತ್ತು ಕಾಳಜಿಯಿಂದ ರೋಗಿಗಳ ತಪಾಸಣೆ ನಡೆಸಿ, ಚಿಕಿತ್ಸೆ ನೀಡಬೇಕೆಂದು ತಿಳಿಸಿದರು.
    ಇದೇ ವೇಳೆ ಆಸ್ಪತ್ರೆಯ ಎಂಐಸಿಯು ಸೇರಿದಂತೆ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ, ರೋಗಿಗಳೊಂದಿಗೆ ಸಮಾಲೋಚಿಸಿದರು. ರೋಗಿಗಳ ಸೂಕ್ತ ಕಾಳಜಿ ವಹಿಸುವಂತೆ ವೈದ್ಯರು/ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ,  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಇತರೆ ವೈದ್ಯರು, ಅಧಿಕಾರಿಗಳು ಇದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.