ಚುನಾವಣೆ- ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದರೆ ಕಟ್ಟು ನಿಟ್ಟಿನ ಕ್ರಮ:ಜಿಲ್ಲಾಧಿಕಾರಿ

ಶಿವಮೊಗ್ಗ : ಜಿಲ್ಲೆಯಲ್ಲಿ ಪಾರದರ್ಶಕವಾದ ಚುನಾವಣೆ ಮತದಾನ ನಡೆಯಲು ಸಿದ್ಧತೆ ಮಾಡಲಾಗಿದೆ.  ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದರೆ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ/ ಜಿಲ್ಲಾ ಚುನಾವಣಾಧಿಕಾರಿ ಆದ "ಡಾ. ಸೆಲ್ವಮಣಿ  ತಿಳಿಸಿದರು.
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಭಾಗವಹಿಸಿದ್ದರು
ನಗರದ ಪತ್ರಿಕಾ ಭವನದಲ್ಲಿ ಪ್ರೆಸ್‌ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ‌

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು 40 ಲಕ್ಷ ರೂ. ವರೆಗೂ ಖರ್ಚು ಮಾಡುವು ದಕ್ಕೆ ಅವಕಾಶವಿದೆ. ಖರ್ಚು ವೆಚ್ಚದ ಸಂಪೂರ್ಣ ಮಾಹಿತಿ ನೀಡಬೇಕು.  ನಿಗದಿಪಡಿಸಿದ್ದ ಕ್ಕಿಂತ ಹೆಚ್ಚಿನ ಖರ್ಚು ಮಾಡುವುದು ಕಂಡು ಬಂದರೆ ಚುನಾವಣಾ ಆಯೋಗದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧಡೆ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಹಲವೆಡೆ ಸಮರ್ಪಕ ದಾಖಲಾತಿ ಇಲ್ಲದ ನಗದು ಹಾಗೂ ವಿವಿಧ ವಸ್ತುಗಳು, ಮಧ್ಯದ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿ ಗಳು ಮತದಾರರನ್ನು ಓಲೈಸಲು ಯಾವುದೇ ರೀತಿಯಲ್ಲಿ ಆಮಿಷ ಒಡ್ಡಬಾರದು. ಧಾರ್ಮಿಕ ಸ್ಥಳಗಳಲ್ಲೂ ರಾಜಕೀಯ ಚಟುವಟಿಕೆ 
ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಬಂದರೆ ಕಂಡು ಕ್ರಮ ಕೈಗೊಳ್ಳಲಾಗುವುದು ಎಂದರು. 

ಮಿಥುನ್ ಕುಮಾರ್ ಜಿಲ್ಲಾ ರಕ್ಷಣಾಧಿಕಾರಿರವರು ಮಾತನಾಡುತ್ತಾ ಜಿಲ್ಲೆಯಲ್ಲಿ ಶಾಂತಿ ಯುತ ಮತದಾನಕ್ಕೆ ಸೂಕ್ತ ಪೊಲೀಸ್ ಭದ್ರತೆ ಕೈಗೊಳ್ಳ 
ಲಾಗಿದೆ. ಈಗಾಗಲೇ ಜಿಲ್ಲೆಗೆ ಸಿಆರ್ ಪಿಎಫ್ ನ 6 ತುಕುಡಿಗಳು ಬಂದಿವೆ. ಇನ್ನು ಎಂಟು ತೂಕಡಿಗಳು ಇಂದು ಅಥವಾ ನಾಳೆ ಜಿಲ್ಲೆಗೆ ಆಗಮಿಸಲಿದೆ ಎಂದರು. ಅಲ್ಲದೆ ಆರು ಜನರ ಮೇಲೆ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಲಾಗಿದೆ ಎಂದರು. 
 ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೂ ಸುಮಾರು 1300ಕ್ಕೂ ಹೆಚ್ಚು ಕೇಸುಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ 1500 ರೌಡಿ ಶೀಟರ್‌ಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾ ಗಿದ್ದು ಅವರ ಮೇಲೆ ನಿಗಾ ಇಡಲಾ 
ಗಿದೆ ಎಂದು ಮಾಹಿತಿ ನೀಡಿದರು. 

ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ಒಟ್ಟು 61 ಮಂದಿಯನ್ನು ಗಡಿಪಾರು ಮಾಡುವಂತೆ ಶಿಫಾರಸು ಮಾಡಲಾಗಿದ್ದು ಅದರಲ್ಲಿ 51 ಮಂದಿ ಗಡಿಪಾರು ಆಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಗಡಿಪಾರು ಮಾಡಲಾದಂತಹ ಜಿಲ್ಲೆಗಳಲ್ಲಿ ಶಿವಮೊಗ್ಗ ಮೊದಲ ಸ್ಥಾನದಲ್ಲಿದೆ. 
ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲೆಯ ವಿವಿಧಡೆ 36 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ನಗದು, ಮಧ್ಯ ಸೇರಿದಂತೆ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 17 ಕೋಟಿ ರೂಗಳಷ್ಟು ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು. 

ಜಿಪಂ ಸಿಇಓ ಸ್ನೇಹಲ್ ಎಸ್. ಲೋಖಂಡೆ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ನೂರರಷ್ಟು ಮತದಾನ ಆಗುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗಿದೆ ಎಂದು ಹೇಳಿದರು. 

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್ ಯಡಗೆರೆ, ಪ್ರೆಸ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.