ಇಂದು ಸಂಜೆ ಬೆಂಗಳೂರಿನಲ್ಲಿ ಕೆಬಿಪಿ ಜೆಡಿಎಸ್ ಗೆ ಸೇರ್ಪಡೆ:ಸದ್ಯದಲ್ಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ!!

ಶಿವಮೊಗ್ಗ: ಇಂದು  ಜೆಡಿಎಸ್ ವರಿಷ್ಟರಾದ ಹೆಚ್.ಡಿ. ದೇವೇಗೌಡ. ಮತ್ತು ಕುಮಾರ್ ಸ್ವಾಮಿ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಅಗಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.ಬೆಂಗಳೂರಿಗೆ ತೆರಳಿರುವ ಪ್ರಸನ್ನ ಕುಮಾರ್, ಮಾಜಿ ಸಿಎಂ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ 
ಯೊಂದಿಗೆ  ಒಂದು ಸುತ್ತಿನ ಮಾತುಕತೆ ನಡೆಸಿರುವುದಾಗಿ ತಿಳಿದು ಬಂದಿದೆ. 
ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ರವರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಮತ್ತು ವಕ್ತಾರರ ಹುದ್ದೆಗೆ ಇಂದು ಸಂಜೆ ರಾಜಿನಾಮೆ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕೆಬಿಪಿ ಅಸಮಾಧಾನ ಗೊಂಡು ಇದೀಗ ಶಿವಮೊಗ್ಗದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ . ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬಿ ಫಾರಂ ಪಡೆದು ಶಿವಮೊಗ್ಗಕ್ಕೆ ಆಗಮಿಸುವುದಾಗಿ ತಿಳಿದುಬಂದಿದೆ.

ಈ ಬಾರಿ ಕಾಂಗ್ರೆಸ್ ನಿಂದ ಮತ್ತೊಮ್ಮೆ ಟಿಕೆಟ್ ಬಯಸಿದ್ದ ಪ್ರಸನ್ನ ಕುಮಾರ್ ಗೆ ಕೊನೆ ಕ್ಷಣದಲ್ಲಿ ಟಿಕೇಟ್ ಕೈ ತಪ್ಪಿತ್ತು. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯದ ಮೇರೆಗೆ ಜೆಡಿಎಸ್ ನಿಂದ ಕಣಕ್ಕಿಳಿಯಲು ಪ್ರಸನ್ನ ಕುಮಾರ್ ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.

ಇಂದು ಸಂಜೆ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಟಿಕೇಟ್ ಯಾರಿಗೆ ಎಂಬುದು ಸಧ್ಯದಲ್ಲಿ ಪ್ರಕಟವಾಗಲಿದೆ.

ಒಟ್ಟಿನಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ರಾಜಕೀಯ ಬೆಳವಣಿಗೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸಿದೆ. ಮುಂದೇನಾಗುವುದು ಕಾದು ನೋಡುವ....

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.