ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಮತ ಎಣಿಕೆ :ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ
ಶಿವಮೊಗ್ಗ; *ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023ರ ಮತ ಎಣಿಕೆ ಕಾರ್ಯವು ದಿನಾಂಕ: 13-05-2023 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿರುವುದರಿಂದ,* ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ, *ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 12-05-2023 ರ ಸಂಜೆ 6-00 ಗಂಟೆಯಿಂದ ದಿನಾಂಕಃ 14-05-2023 ರ ರಾತ್ರಿ 10-00 ಗಂಟೆಯ ವರೆಗೆ* ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ಕಲಂ 144 ರಿತ್ಯಾ ನಿಷೇದಾಜ್ಞೆಯನ್ನು* ಜಾರಿಗೊಳಿಸಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶಿಸಿರುತ್ತಾರೆ.
1) ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 12-05-2023 ರ ಸಂಜೆ 6-00 ಗಂಟೆಯಿಂದ ದಿನಾಂಕಃ 14-05-2023 ರ ರಾತ್ರಿ 10-00 ಗಂಟೆಯ ವರೆಗೆ *ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಐದಕ್ಕಿಂತ ಹೆಚ್ಚು ಜನರು* ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಿದೆ.
2. ಯಾವುದೇ ರೀತಿಯ *ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ* ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಡೆಸುವಂತಿಲ್ಲ.
3. ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು, ಕೋಲು, ಬಂದೂಕು, ಲಾಠಿ, *ಯಾವುದೇ ಮಾರಕಾಸ್ತ್ರ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು* ಒಯ್ಯುವುದನ್ನು / ಶೇಖರಿಸುವುದನ್ನು ನಿಷೇಧಿಸಿದೆ.
4. ಯಾವುದೇ *ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ* ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
5. *ಗೆದ್ದ ಅಭ್ಯರ್ಥಿಗಳ ಮರವಣಿಗೆ ಹಾಗೂ ಪಟಾಕಿ / ಬಾಣ / ಬಿರುಸುಗಳನ್ನು ಹಚ್ಚುವುದು* ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳು, ಗೆಲುವಿನ ಸಂಭ್ರಮಗಳನ್ನು ನಡೆಸುವಂತಿಲ್ಲ..
6. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿಯ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, *ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.*
7. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ *ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.*
8. *ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು,* ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಿರುವುದನ್ನು ನಿಷೇಧಿಸಲಾಗಿದೆ.
9. ಯಾವುದೇ ರೀತಿಯ *ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು,* ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ.
10. ಮಾನ್ಯ ಚುನಾವಣಾ ಆಯೋಗದ ನಿರ್ದೇಶನದಂತೆ *ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿರುವ* ಪ್ರದೇಶದಲ್ಲಿ ಪ್ರವೇಶಿಸುವುದನ್ನು ನಿಷೇಧಿಸಿದೆ.
11. ಯಾವುದೇ ವ್ಯಕ್ತಿಯು ನಿಷೇಧಿಸಿರುವ *ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ* ಅವುಗಳನ್ನು ವಶಪಡಿಸಿಕೊಳ್ಳಲು ಅಧಿಕಾರವಿದ್ದು, ಅಂತಹ ವ್ಯಕ್ತಿಗಳ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
12. *ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರಲ್ಲಿನ ಷರತ್ತುಗಳನ್ನು* ಕಡ್ಡಾಯವಾಗಿ ಪಾಲಿಸುವುದು.
*ಕಾನೂನು ಉಲ್ಲಂಘನೆ ಸನ್ನಿವೇಶಗಳು ಕಂಡು ಬಂದಲ್ಲಿ, ಕಟ್ಟುನಿಟ್ಟಾಗಿ ಕಾನೂ ಕ್ರಮ ಕೈಗೊಳ್ಳಲಾಗುವುದು.*
Leave a Comment