ಶಿವಮೊಗ್ಗ: 2 ಬಸ್​ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ- ಆಸ್ಪತ್ರೆಗೆ ಎಸ್ಪಿ.ಡಿಸಿ ಬೇಟಿ

ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚೋರಡಿ ಬಳಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರ ಎಂದು ವರದಿಯಾಗಿದೆ.ಎರಡು ಖಾಸಗಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ ಎಂದ ವರದಿಯಾಗಿದೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಮತ್ತು ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಅಪಘಾತವಾದ ಬಗ್ಗೆ ಸುದ್ದಿ ತಿಳಿದು ಮೆಗ್ಗಾನ್ ಆಸ್ಪತ್ರೆಗೆ ಸಂಸದ ರಾಘವೇಂದ್ರ, ವಿಜೇಂದ್ರ ಬೇಟಿ ಮಾಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಮಾಹಿತಿ ಪಡೆದರು.ಅದೇರೀತಿ ಶಿವಮೊಗ್ಗ ಬಿಜೆಪಿಯ ಅಭ್ಯರ್ಥಿ ಚನ್ನಬಸಪ್ಪ ಮತ್ತು ಡಾ.ಶ್ರೀಧರ್ ಬೇಟಿ ನೀಡಿ ಗಾಯಳುಗಳ ಯೋಗಕ್ಷೇಮ ವಿಚಾರಿಸಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.