ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ: ಮೇ 20 ರ ಶನಿವಾರ ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಲಭಿಸಿದೆ. ಇಂದು ದೆಹಲಿಯಲ್ಲಿ AICC ಯಿಂದ ಘೋಷಣೆಯಾಗಿದೆ.
ಈ ಬಗ್ಗೆ ಮೇ.17ರ ಬುಧವಾರ ಮದ್ಯರಾತ್ರಿ ನಡೆದ ಅಂತಿಮ ಸಬೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಮೇ 20 ರ ಶನಿವಾರ ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.
Leave a Comment