ಶಾಸಕರಾಗಿ ಪ್ರಮಾಣವಚನ: ಶಾರದಾ ಪೂರ್ಯನಾಯ್ಕ್, ಶಾಸಕರು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ

  ಶಿವಮೊಗ್ಗ: ಸಂವಿಧಾನ ಮತ್ತು ದೇವರ ಹೆಸರಿನಲ್ಲಿ ವಿಧಾನಸೌಧದಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 ಕ್ಷೇತ್ರದ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತೇನೆ. ನುಡಿದಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಳ್ಳುವ ಕಾರ್ಯವನ್ನು ಮಾಡುತ್ತೇನೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಹಕ್ಕುಪತ್ರ ಸಮಸ್ಯೆ, ನೀರಾವರಿ ಸಮಸ್ಯೆಗಳಿಗೆ ಹೋರಾಡಿ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ. ಚುನಾವಣೆಯಲ್ಲಿ ಹಗಲಿರುಳು ದುಡಿದು, ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು, ನನ್ನನ್ನು ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳುಹಿಸಿಕೊಟ್ಟ ಕ್ಷೇತ್ರದ ಮತದಾರ ಪ್ರಭುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

 ಜನಪ್ರತಿನಿಧಿಯಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತೇನೆಂದು ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.