ಅತಿವೃಷ್ಟಿ ಹಾನಿ ತಪ್ಪಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

ಶಿವಮೊಗ್ಗ,: ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಕುರಿತು ಸೂಚನೆಗಳನ್ನು ನೀಡಿದರು.
ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಕೃತಕ ನೆರೆ ಉಂಟಾಗದAತೆ ಕ್ರಮ ಕೈಗೊಳ್ಳಬೇಕು. ಪ್ರಮುಖ ಕಾಲುವೆಗಳ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಕಂಟ್ರೋಲ್ ರೂಂ: ಎಲ್ಲಾ ತಾಲೂಕುಗಳಲ್ಲಿ ಅತಿವೃಷ್ಟಿಗೆ ಸಂಬAಧಿಸಿದAತೆ ತುರ್ತು ನೆರವು, ಕ್ರಮಗೊಳ್ಳಲು ಅನುಕೂಲವಾಗುವಂತೆ 24x7 ನಿಯಂತ್ರಣ ಕೊಠಡಿಗಳನ್ನು ತಕ್ಷಣ ಆರಂಭಿಸಬೇಕು. ಅತಿ ಹೆಚ್ಚು ಮಳೆಯಾಗುವ ಕುರಿತಾದ ಮುನ್ಸೂಚನೆಗಳನ್ನು ಆಯಾ ಪ್ರದೇಶದ ಜನರಿಗೆ ಮೊದಲೇ ತಿಳಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಗ್ನಿಶಾಮಕ ದಳ, ಹೋಂಗಾರ್ಡ್ಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ತಾಲೂಕುಗಳಿಗೆ ಈಗಾಗಲೇ ರಕ್ಷಣಾ ಬೋಟ್‌ಗಳನ್ನು ನೀಡಲಾಗಿದ್ದು ಅವುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಬೇಕು. ಅತಿವೃಷ್ಟಿಯಿಂದ ಯಾವುದೇ ಸಣ್ಣ ಅನಾಹುತವಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸಾಂಕ್ರಾಮಿಕ ರೋಗ ತಡೆ: ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಖಾತ್ರಿಪಡಿಸಬೇಕು. ಹಾವು ಕಡಿತದ ಇಂಜೆಕ್ಷನ್ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಎಲ್ಲಾ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಲಭ್ಯವಿರಬೇಕು ಎಂದು ಹೇಳಿದರು.

ಗಾಳಿ ಮಳೆಯಿಂದಾಗಿ ಮರಗಳು ಬಿದ್ದ ಸಂದರ್ಭದಲ್ಲಿ ತಕ್ಷಣ ಅವುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸಂಪರ್ಕ ಕಡಿತವಾಗುವ ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳನ್ನು ತಕ್ಷಣ ಕಲ್ಪಿಸಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್‌ಗಳು ಮುರಿದು ಬಿದ್ದಾಗ ತಕ್ಷಣ ಅವುಗಳನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಪುನರಾರಂಭಿಸಲು ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸೂಚನೆ: ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನಾಹುತ ಸಂಭವಿಸಬಹುದಾದ ಶಾಲಾ ಕೊಠಡಿಗಳು, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಬೇಕು. ಜಾನುವಾರು ಹಾನಿ ಮತ್ತು ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪ್ರಕೃತಿ ವಿಕೋಪ ಕಾರ್ಯಗಳಿಗೆ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಸೂಚನೆಗಳನ್ನು ನೀಡಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.