ಧೀಮಂತ ರಾಜಕಾರಣಿ,ರೈತನಾಯಕ,ಶ್ರೀಯುತ ಬಿ.ಎಸ್. ಯಡಿಯೂರಪ್ಪರವರಿಗೆ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ

ಶಿವಮೊಗ್ಗ:ಇರುವಕ್ಕಿಯಲ್ಲಿರುವ  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ದಿನಾಂಕ:21-07-2023ರಂದು ಸಂಜೆ 4 ಗಂಟೆಗೆ 8 ನೇ ಘಟಿಕೋತ್ಸವ ಸುಗ್ಗಿಯ ಸಂಭ್ರಮ ಸಮಾರಂಭ ಹಮ್ಮಿಕೊಳ್ಳಲಾಗಿದೆ. 
  ಧೀಮಂತ ರಾಜಕಾರಣಿ. ರೈತನಾಯಕ  ಶ್ರೀಯುತ ಬಿ.ಎಸ್. ಯಡಿಯೂರಪ್ಪನವರವರಿಗೆ ಘಟಿಕೋತ್ಸವದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ 

ಘಟಿಕೋತ್ಸವ ಸಮಾರಂಭದಲ್ಲಿ   ಶ್ರೀಯುತ ಬಿ.ಎಸ್. ಯಡಿಯೂರಪ್ಪನವರು ನಾಡುಕಂಡ ಒಬ್ಬ ಧೀಮಂತ ರಾಜಕಾರಣಿ. ರೈತನಾಯಕ ಎನಿಸಿಕೊಂಡ ಇವರು ಪ್ರತ್ಯೇಕ ಕೃಷಿ ಆಯವ್ಯಯ ಮಂಡಿಸಿದಾ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ವಿನೂತನ ಯೋಜನೆಗಳನ್ನು ಸಾಕಾರಗೊಳಿಸಿದ ಸಮಾಜಮುಖಿ ಚಿಂತಕ, ಮಲೆನಾಡಿನಲ್ಲಿ ಕೃಷಿ ಶಿಕ್ಷಣ, ಸಂಶೋಧನೆ, ವಿಸ್ತರಣೆಯ ಅಧ್ಯಕ ಮನಗಂಡು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆರಂಭಕ್ಕೆ ಮುನ್ನ ಬರೆದ ಅವರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿ  ಡಾ. ಆರ್.ಸಿ.ಜಗದೀಶ್ ಹೇಳಿದರು.

ಇಂದು ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ವಿಶ್ವವಿದ್ಯಾಲಯದ ವರದಿ ಒಂದು ದಶಕದಿಂದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವ ಕೃಷಿ ಶಿಕ್ಷಣ, ಸಂಶೋಧನೆ, ವಿಸ್ತರಣಾ ಕ್ಷೇತ್ರದಲ್ಲಿ ಗುರುತರವಾದ ಸೇವೆ ಸಲ್ಲಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ನೂತನ ಇರುವಕ್ಕಿ ಆವರಣದಲ್ಲಿ ಕಾರ್ಯನಿರ್ವಹಿಸಲು ಪಾರಂಭಿಸಿ ವರ್ಷ ತುಂಬಿವೆ. 
ಮಲೆನಾಡಿನ ಹೆಮ್ಮೆಯ ಈ ವಿಶ್ವವಿದ್ಯಾಲಯದ  ಘಟಿಕೋತ್ಸವವನ್ನು ದಿನಾಂಕ:21-07-2023ರಂದು ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. 

ಕರ್ನಾಟಕ ಸರ್ಕಾರದ ಸನ್ಮಾನ್ಯ ರಾಜ್ಯಪಾಲರು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಶ್ರೀ ಥಾವರ್‌ಚಂಡ ಗೆಲ್ಲೋಟ್ ಅವರು ಈ ಘಟಿಕೋತ್ಸವಕ್ಕೆ ಚಾಲನೆ ನೀಡುವರು ಎಂದರು.

ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರು ರಾಜ್ಯ ಸಭಾಸದಸ್ಯರು, ಧರ್ಮಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ, ಗ್ರಾಮೀಣ 
ಚಿಂತಕರಾದ 
ಡಾ.ವಿರೇಂದ್ರ ಹೆಗ್ಗಡೆಯವರು ಎಂಟನೇ ಘಟಿಕೋತ್ಸವ ಭಾಷಣವನ್ನು 
ಮಾಡಲಿದ್ದಾರೆ ಎಂದರು.

ಪದವಿ ಸಂಪೂರ್ಣಗೊಳಿಸಿದವರಿಗೆ ಪದವಿ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾಗಿರುವ ಸನ್ಮಾನ್ಯ ಶ್ರೀ. ಎಸ್ ಚೆಲುವರಾಯಸ್ವಾಮಿ ಯವರು ಘಟಿಕೋತ್ಸವದಲ್ಲಿ ಭಾಗವಹಿಸುವರು ಎಂದರು.

 ಈ ಘಟಿಕೋತ್ಸವ ಸಮಾರಂಭದಲ್ಲಿ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಶೈಕ್ಷಣಿಕ ಸಂಪತ್ತಿನ ಸದಸ್ಯರುಗಳು, ವಿಶ್ರಾಂತ ಕುಲಪತಿಗಳು, ಡೀನ್‌ಗಳು ಮತ್ತು ನಿರ್ದೇಶಕರು, ವಿಶ್ರಾಂತ ಅಧಿಕಾರಿಗಳು ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಆಹ್ವಾನಿತ ಗಣ್ಯರು, ಗೌರವಾನ್ವಿತ ಪದಕ ದಾನಿಗಳು, ವಿದ್ಯಾರ್ಥಿಗಳು ಅವರ ತಂದೆ, ತಾಯಿ ಪೋಷಕರು ಭಾಗವಹಿಸಲಿದ್ದಾರೆ ಎಂದರು.

ಎಂಟನೇ ಘಟಿಕೋತ್ಸವದಲ್ಲಿ 409 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ನವವಿ ಹಾಗೂ 101 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 23 ವಿದ್ಯಾರ್ಥಿಗಳು ಪಿಹೆಚ್ , ನದ ಪಡೆಯುತ್ತಿದ್ದಾರೆ. ಇವರಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಮಾಡಿದ 08 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಅವರಿಗೆ ಒಟ್ಟು 15 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದರು.
. 14 ಎಂ.ಎಸ್ಸಿ. ವಿದ್ಯಾರ್ಥಿಗಳು, ಹೆಚ್.ಡಿ. ವಿದ್ಯಾರ್ಥಿಗಳು ಚಿನ್ನದ ಸಾಧನೆ ಮಾಡಿದ್ದಾರೆ. ಘಟಿಕೋತ್ಸವದಲ್ಲಿ ಒಟ್ಟು 31 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.