ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಹಲವು ಮುಖಂಡರುಗಳು ಕಾಂಗ್ರೆಸ್ ಸೇರ್ಪಡೆ..!*

*ಲೋಕ ಸಭಾ ಮಾಜಿ ಸದಸ್ಯರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಸೇರಿದಂತೆ ಹಲವು ಮುಖಂಡರುಗಳು  ಕಾಂಗ್ರೆಸ್ ಸೇರ್ಪಡೆ..!*
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ ನೇತೃತ್ವದಲ್ಲಿ   ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಹಲವು ಮುಖಂಡರೊಂದಿಗೆ ಪಕ್ಷ ಸೇರ್ಪಡೆಗೊಂಡರು..ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು, ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರುರವರು, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹಮದ್ ರವರು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್  ಉಸ್ತುವಾರಿಗಳಾದ ಪಿ.ಎನ್. ಚಂದ್ರಪ್ಪ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ರವರು ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಆರ್.ಎಂ ಮಂಜುನಾಥ್ ಗೌಡ್ರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.