*ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ*

ಶಿವಮೊಗ್ಗ, ಆಗಸ್ಟ್ 22, :
     ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.               
         ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ 5 ರಿಂದ 8 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ.10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
     2023-24 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿ: 15-09-2023 ರೊಳಗೆ ಈ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.