*ಕರ್ನಾಟಕ ರಾಜ್ಯೋತ್ಸವ ವಿಶಿಷ್ಟ ಆಚರಣೆ – ಯಶಸ್ವಿಗೊಳಿಸಲು ಡಿಸಿ ಮನವಿ*

ಶಿವಮೊಗ್ಗ, ಅಕ್ಟೋಬರ್ 30,:
        ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪವನ್ನು ಸಿದ್ದಪಡಿಸಲಾಗಿದೆ.
      ನವೆಂಬರ್ 01 ರಂದು ಜಿಲ್ಲೆಯಾದ್ಯಂತ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದ ರಂಗೋಲಿ ಬಿಡಿಸುವುದು.
    ನವೆಂಬರ್ 01 ರ ಬೆಳಿಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರು ಎದ್ದು ನಿಂತು ಗೌರವ ಸಲ್ಲಿಸುವುದು.
   ನವೆಂಬರ್ 01 ರ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿ ಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿ ಪಟ ಉತ್ಸವ ಆಚರಿಸುವುದು.
   ನವೆಂಬರ್ 01 ರಂದು ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ(ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದು.
    ಜಿಲ್ಲೆಯ ಸಮಸ್ತ ನಾಗರೀಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ನಾಡು-ನುಡಿಯ ಅಭಿಮಾನದೊಂದಿಗೆ ಪ್ರತಿಯೊಬ್ಬರು ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.