ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಅಕ್ಟೋಬರ್ 18 : ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣ https://cbseitems.nic.in/2023/nvsix_11 ಮೂಲಕ. ಅಕ್ಟೋಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಸದವಕಾಶ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment