ತೀರ್ಥಹಳ್ಳಿ :ತಾಲ್ಲೂಕಿನ ಅರಳಸುರಳಿಯ ಮನೆಯೊಂದರಲ್ಲಿ ಅಗ್ನಿ ಅವಘಡ:ಮೂರು ಜನ ಸಜೀವ ದಹನ

ತೀರ್ಥಹಳ್ಳಿ :ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಘಟನೆಯೊಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ಬೆಂಕಿಗೆ ಸುಟ್ಟು ಕರಕಲಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಸುಟ್ಟ ಗಾಯ ದಿಂದ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೋಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಒಂದೇ ಕುಟುಂಬದ ಮೂವರ ಸಜೀವ ದಹನ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬಿಳಿಸಿದೆ.

ಘಟನೆಯ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಅಧಿಕಾರಿಗಳು ಮತ್ತು ಎಸ್ಪಿ ಮಿಥುನ್ ಕುಮಾರ್ ರವರು ಬೇಟಿ ನೀಡಿದ್ದಾರೆ. ತನಿಖೆ ನಡೆಯುತ್ತಿದೆ. 

ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.