*ಭದ್ರಾವತಿ ಯಲ್ಲಿ ಉರ್ದು ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವ, ಸಾಹಿತ್ಯ ಕಮ್ಮಟ*
* ಭದ್ರಾವತಿ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ನವೆಂಬರ್ ೨೨ ರಂದು ಉರ್ದು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ದೀಪಬೆಳಗಿಸಿ ಉದ್ಘಾಟಿಸಿದರು.
ತಾಲ್ಲೂಕು ಅಧ್ಯಕ್ಷರಾದ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಕೆ. ನಾಗೇಂದ್ರಪ್ಪ, ಕುವೆಂಪು ವಿ.ವಿ. ಸಂಶೋಧನಾ ಉಪಾಧ್ಯಕ್ಷರಾದ ಡಾ. ಹಸೀನಾ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಬಿ. ಕೆ. ಜಗನ್ನಾಥ, ನಮ್ಮೊಂದಿಗೆ ಕಸಾಪ ತಾಲ್ಲೂಕು ಅಧ್ಯಕ್ಷರಾದ ಕೋಡ್ಲು ಯಜ್ಞಯ್ಯ, ಸರ್ಕಾರಿ ಉರ್ದು ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಹನಾ ಫಾತಿಮಾ, ಮೌಲಾನಾ ಆಜಾದ್ ಮಾದರಿ ಶಾಲಾ ಮುಖ್ಯ ಶಿಕ್ಷಕರಾದ ಪಿ. ಯು. ಅನಿಲ್, ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಕೋಕಿಲಾ ಉಪಸ್ಥಿತರಿದ್ದರು. ಶಿಕ್ಷಕರಾದ ಶಫಿಉಲ್ಲಾ ಸ್ವಾಗತಿಸಿದರು. ಕಸಾಪ ಕಾರ್ಯದರ್ಶಿ ಎಚ್. ತಿಮ್ಮಪ್ಪ, ಖಜಾಂಚಿ ಹಿರಿಯೂರು ಪ್ರಸನ್ನ, ಜಿಲ್ಲಾ ಸಮಿತಿಯ ಕುಬೇರಪ್ಪ, ಸುಮತಿ ಕಾರಂತ, ನಾಗರಾಜ್, ತಿಪ್ಪೇಸ್ವಾಮಿ, ಗಂಗರಾಜ್, ಕಮಲಕುಮಾರಿ ಸೇರಿದಂತೆ ವೇದಿಕೆಯ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು.*
.
Leave a Comment