ಶಿವಮೊಗ್ಗ : ಜನನಿಬಿಡ ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ, ನ. 14: ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಲ್ ಸಮೀಪದ ಫ್ಲೈ ಓವರ್ ಬಳಿ, ಜನನಿಬಿಡ ಸ್ಥಳದಲ್ಲಿಯೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.ಅಶೋಕ ರಸ್ತೆಯ ಧರ್ಮರಾಯನ ಕೇರಿ ನಿವಾಸಿ ಮಲ್ಲೇಶ್ (35) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.ಮಲ್ಲೇಶ್ ಬೈಕ್ ನಲ್ಲಿ ಬರುವ ವೇಳೆ ಮತ್ತೊಂದು ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ವೈಯಕ್ತಿಕ ಕಾರಣದಿಂದ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.