ನಿವೃತ್ತ ಹೆಡ್ ಕಾನ್ಸ್ ಟೇಬಲ್ ಚಂದ್ರು ನಿಧನ-ಸಂತಾಪ

ಶಿವಮೊಗ್ಗ:  ನಿವೃತ್ತ ಹೆಡ್ ಕಾನ್ಸ್ ಟೇಬಲ್ ಚಂದ್ರು ಇವರು ಇಂದು ಬೆಳಿಗ್ಗೆ ಮರಣ ಹೊಂದಿರುತ್ತಾರೆ. ಶಿವಮೊಗ್ಗದಲ್ಲಿ ARB ಕಾಲೋನಿ ಶಿವಮೊಗ್ಗ ಇಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

 ಮೃತ ಚಂದ್ರುರವರು 1992 ರಲ್ಲಿ ಪೊಲೀಸ್ ಇಲಾ
ಖೆಗೆ ಸೇರಿ ದಿನಾಂಕ :31-10-2021 ರಂದು ನಿವ್ರತ್ತಿ ಹೊಂದಿ ಶಿವಮೊಗ್ಗ ಜಿಲ್ಲಾ ನಿವ್ರತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯತ್ವ ಪಡೆದಿದ್ದರು.

 ಮೃತ ದೇಹವನ್ನು ಅಂತ್ಯಕ್ರಿಯೆ ಗಾಗಿ ಸಂಜೆ ನಾಲ್ಕು ಗಂಟೆಗೆ ಅವರ ಸ್ವಗ್ರಾಮ ಭದ್ರಾವತಿ ತಾಲೂಕು ಸುಣ್ಣದಳ್ಳಿ ಗ್ರಾಮಕ್ಕೆ ತೆಗೆದುಕೊಂಡು ಹೋಗುವುದಾಗಿ ಬಲ್ಲ ಮೂಲಗಳಿಂದ  ತಿಳಿದುಬಂದಿದೆ.

 ಮೃತರ ಸುದ್ದಿ ತಿಳಿದ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಪಧಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಮತ್ತು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ಸಲುವಾಗಿ ಪೊಲೀಸ್ ಇಲಾಖೆ ಯಿಂದ ಒದಗಬಹುದಾದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಕೊಡಿಸಿಕೊಡುವುದಾಗಿ ತಿಳಿಸಿದ್ದಾರೆ.

ಮೃತರು ಶಿವಮೊಗ್ಗದ ಟ್ರಾಫಿಕ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸಿದ್ದರು.  ಮೃತರು ನನ್ನ ಆತ್ಮೀಯ ಸ್ನೇಹಿತ ಕೂಡ ಆಗಿದ್ದರು.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಮತ್ತು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವ...

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.