ಶಿವಮೊಗ್ಗದ ಜಟ್​ ಪಟ್​ ನಗರ ನಿವಾಸಿ ಶಶಿ ಯಾನೆ ಶಶಿಕುಮಾರ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ!!

ಶಿವಮೊಗ್ಗದ ಫ್ರೀಡಂಪಾರ್ಕ್ ವಾಕ್ ಪಾತ್​ ಆಟೋ ಸ್ಟ್ಯಾಂಡ್​ ಬಳಿಯಲ್ಲಿ ಸುಮಾರು 12 ಗಂಟೆ ಸಮಯದಲ್ಲಿ ಓರ್ವ ಯುವಕನ ಮೇಲೆ ಮಾರಣಾಂತಿಕವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.ಹಲ್ಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
 ಶಿವಮೊಗ್ಗದ ಜಟ್​ ಪಟ್​ ನಗರ ನಿವಾಸಿ ಶಶಿ ಯಾನೆ ಶಶಿಕುಮಾರ ಎಂಬಾತನ ಮೇಲೆ ಹಲ್ಲೆಯಾಗಿ ರಕ್ತಸಿಕ್ತವಾಗಿ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.ಹಲ್ಲೆಗೊಳಗಾದ  ಗಾಯಾಳು ವ್ಯಕ್ತಿ ಯನ್ನು ಹೆಚ್ಚಿನ ಚಿಕಿತ್ಸೆ ಸಲುವಾಗಿ ಮೆಗ್ಗಾನ್ ಆಸ್ಪತ್ರೆ ಸೇರಿಸಲಾಗಿದೆ

ಹಳೇಯ ದ್ವೇಷದ ಹಿನ್ನೆಲೆಯಲ್ಲಿ  ನಾಲ್ವರು ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.ಹೆಚ್ಚಿನ ವಿವರ ಲಭ್ಯವಾಗಬೇಕಿದೆ.
ಹಲ್ಲೆಗೊಳಗಾದ ವ್ಯಕ್ತಿ ಗಾರೆಕೆಲಸ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಇದೀಗ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಟಾಧಿಕಾರಿಗಳು ಆಗಮಿಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಯಿಂದ ಆರೋಪಿಗಳ ಬಗ್ಗೆ ಮಾಹಿತಿಯನ್ನು ಪಡೆದಿದ್ದು, ಆರೋಪಿಗಳ ಪತ್ತೆಗೆ ಈಗಾಗಲೇ ಬಲೆ ಬೀಸಿದ್ದು ಸದ್ಯದಲ್ಲೇ ಬಂಧನ ಮಾಡುವ ಸಾದ್ಯತೆ ಇದೆ ಎನ್ನಲಾಗಿದೆ.

ಈ ಸಂಬಂದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.



ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.