ಜ.27 ರಂದು ಎಸ್.ರುದ್ರೇಗೌಡರಿಗೆ ಅಭಿನಂದನೆ, ದಿ ಐರನ್ ಮ್ಯಾನ್ ಪುಸ್ತಕ ಬಿಡುಗಡೆ:ಬಿ.ವೈ.ರಾಘವೇಂದ್ರ ಮಾಹಿತಿ

 ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಸ್.ರುದ್ರೇಗೌಡರಿಗೆ ಇದೇ ಜನವರಿ 27 ರಂದು ಅಮೃತಮಯಿ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಾಗೂ ಅವರ ಬದುಕು-ಸಾಧನೆ ಕುರಿತ ದಿ ಐರನ್ ಮ್ಯಾನ್ ಪುಸ್ತಕ ಬಿಡುಗಡೆ ಸಮಾರಂಭವನ್ನು ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಸನ್ ಹಾಲ್ ಪಕ್ಕದ ಮೈದಾನದಲ್ಲಿ ಸಂಜೆ 5-30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ
ಗೌರವಾಧ್ಯಕ್ಷರು ಹಾಗೂ ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು.
ಅವರು ನಗರದ ಮಥುರಾ ಪ್ಯಾರಡೈಸ್‌ನಲ್ಲಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅಂದು ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಗೌರವ ಸಮರ್ಪಣೆ ಮಾಡುವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು, ಗೌಡರ ಬದುಕು-ಸಾಧನೆ ಕುರಿತ ''ಎಸ್. ರುದ್ರೇಗೌಡ-ದಿ ಐರನ್ ಮ್ಯಾನ್'' ಪುಸ್ತಕವನ್ನು ವಿಧಾನ ಪರಿಷತ್‌ ಸಭಾಪತಿಗಳಾದ ಶ್ರೀ ಬಸವರಾಜ್‌ ಹೊರಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್‌ ಮಾಜಿ ಸಭಾಪತಿಗಳಾದ ಶ್ರೀ ಬಿ.ಎಲ್ ಶಂಕರ್ ಅವರು ಗೌಡರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ, ಎಸ್.ರುದ್ರೇಗೌಡರನ್ನು ಕುರಿತ ಕಿರುಚಿತ್ರ ಕೂಡ ಲೋಕಾರ್ಪಣೆಗೊಳ್ಳಲಿದೆ ಎಂದು
ತಿಳಿಸಿದರು.
ಅಭಿನಂದನಾ ಸಮಿತಿಯ ಅಧ್ಯಕ್ಷರು ಹಾಗೂ ನಂಜಪ್ಪ ಗ್ರೂಫ್ ಆಫ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ಟ್ರಸ್ಟಿಡಿ.ಜಿ. ಬೆನಕಪ್ಪ ಮಾತನಾಡಿ, ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಕಷ್ಟು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸರ್ಜಿ ಕನ್ವೆನ್ಸನ್ ಹಾಲ್‌ನಲ್ಲಿ ವಿವಿಧ ವಿಚಾರ ಗೋಷ್ಠಿಗಳು ನಡೆಯಲಿವೆ, ಪಕ್ಕದ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ, ಈಗಾಗಲೇ ಅಭಿಮಾನಿಗಳು, ಹಿತೈಷಿಗಳು, ಬಂಧುಗಳು, ಎಲ್ಲ ಸಮಾಜದ ಗಣ್ಯರು, ಎಲ್ಲರಿಗೂ ಆಹ್ವಾನ ಪತ್ರಿಕೆಯನ್ನು ನೀಡಿ ಆಮಂತ್ರಿಸಲಾಗಿದೆ. ಒಂದು ವೇಳೆ ಆಹ್ವಾನ ಪತ್ರಿಕೆ ತಲುಪದವರು ಇದನ್ನೇ ವೈಯಕ್ತಿಕ ಆಹ್ವಾನವೆಂದು ತಿಳಿದು ನಮ್ಮ ಹೆಮ್ಮೆಯ ಈ ಸಂಭ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. ಆಗಮಿಸುವ ಸರ್ವರಿಗೂ ಮಧ್ಯಾಹ್ನ ಹಾಗೂ ರಾತ್ರಿ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಸರ್ಜಿ ಮಾತನಾಡಿ, ಅಂದು ಬೆಳಗ್ಗೆ 10.30 ರಿಂದ ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ಯವಕರಿಗೆ ಮಾರ್ಗದರ್ಶಿ ವಿಚಾರಗೋಷ್ಠಿ ನಡೆಯಲಿದೆ. ಶ್ರೀ ರುದ್ರೇಗೌಡರ ವ್ಯಕ್ತಿತ್ವದ ಭಾಗವಾದ ರಾಜಕಾರಣ, ಸಮಾಜಸೇವೆ, ಕೈಗಾರಿಕೆಗಳ ಕುರಿತು ಚರ್ಚೆಗಳನ್ನು ಯುವಕರಿಗಾಗಿ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಮೂವರು ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಯುವಕ-ಯುವತಿಯರೊಂದಿಗೆ ಸಾಕಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಮೌಲ್ಯಾಧಾರಿತ ರಾಜಕಾರಣ ಕುರಿತು, ಬೆಂಗಳೂರು ಅದಮ್ಯ ಚೇತನ ಫೌಂಡೇಷನ್‌ನ ಶ್ರೀಮತಿ ತೇಜಸಿನಿ ಅನಂತಕುಮಾರ್‌ ಅವರು ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಹಾಗೂ ಕಿರ್ಲೋಸ್ಕರ್ ಫೆರುಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮ್ಯಾನೇಜ್‌ಮೆಂಟ್ ಆಂಡ್ ಟೆಕ್ನಿಕಲ್ ಅಡ್ರೈಜರ್ ಬಿ.ಎಸ್.ಗೋವಿಂದ್ ಅವರು ಸಾಧನೆಗೊಂದು ಗುರಿ ವಿಷಯ ಕುರಿತು ವಿಚಾರ ಗೋಷ್ಟಿ ನಡೆಸಿಕೊಡಲಿದ್ದಾರೆ. ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರು ರಮಣಶ್ರೀ ಫೌಂಡೇಷನ್‌ನ ಅಧ್ಯಕ್ಷರಾದ ನಾಡೋಜ ಎಸ್.ಷಡಕ್ಷರಿ ಅವರು ವಹಿಸಲಿದ್ದಾರೆ.

 ವಿವಿಧ ಕ್ಷೇತ್ರಗಳ ಆಯ್ಕೆ ಯುವಕರೊಂದಿಗೆ ಶ್ರೀ ರುದ್ರೇಗೌಡರ ಬದುಕು-ಸಾಧನೆ ಕುರಿತು "ಅಂತರಂಗ-ಬಹಿರಂಗ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅವರ ಬೆಳವಣಿಗೆ, ಕಷ್ಟಗಳನ್ನು ಅವಕಾಶಗಳನ್ನಾಗಿಸಿಕೊಂಡು ಸಾಧಿಸಿದ ರೀತಿ, ಉದ್ಯಮಗಳನ್ನು ಕಟ್ಟಿದ ಶ್ರಮ, ಎಲ್ಲರನ್ನೂ ಜೊತೆಯಾಗಿ ಬೆಳೆಸಿದ ಪರಿ, ಈ ಎಲ್ಲ ವಿಚಾರಗಳನ್ನೂ ಅವರೊಂದಿಗಿನ ಆತ್ಮೀಯ ಸಂವಾದದಲ್ಲಿ ಅವರ ಪುತ್ರಿ ಶ್ರೀಮತಿ ಚೈತ್ರ ಅರುಣ್
ನಿರ್ವಹಿಸಲಿದ್ದಾರೆ ಎಂದರು.
ಈ ವಿಚಾರಗೋಷ್ಠಿಗಳನ್ನು ಯುವ ಜನಾಂಗದ ಭವಿಷ್ಯಕ್ಕೆ ಮಾರ್ಗದರ್ಶಿಯಾಗಿರುವಂತೆ ರೂಪಿಸಲಾಗಿದೆ. ಯುವ ಸಮೂಹದಲ್ಲಿ ಹೊಸ ಬದಲಾವಣೆ ತರುವ, ಪರಿಸರಾಸಕ್ತರು, ಹೊಸದಾಗಿ ಯಾವುದೇ ಉದ್ಯಮವನ್ನು ಆರಂಭಿಸಬೇಕು ಎಂಬ ಚಿಂತನೆ ಹೊಂದಿದವರು, ಈಗಾಗಲೇ ಸಣ್ಣ
ಉದ್ಯಮಗಳನ್ನು ನಡೆಸುತ್ತಿರುವವರು, ಪದವಿ ವಿದ್ಯಾಭ್ಯಾಸ ಮಾಡುತ್ತಿರುವವರು, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಆಲೋಚನೆ ಇಟ್ಟುಕೊಂಡವರು, ಈಗಾಗಲೇ ವಿವಿಧ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳಾಗಿ ಹಾಗೂ ಎಚ್‌ಆ‌ ಆಗಿ ಕೆಲಸ ಮಾಡುತ್ತಿರುವವರು ಈ ವಿಚಾರ ಗೋಷ್ಠಿಗಳಿಗೆ ಭಾಗವಹಿಸಲು ಅರ್ಹರು. ಭಾಗವಹಿಸಬಹುದು, 800 ಜನರಿಗೆ ಮಾತ್ರ ಅವಕಾಶ ಇರುತ್ತದೆ.ಕಾರ್ಯಕ್ರಮಕ್ಕೆ ಆಗಮಿಸುವವರು ಕಾರು ಹಾಗೂ ದ್ವಿಚಕ್ರ ವಾಹನ ಪಾರ್ಕಿಂಗ್ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ, ಅಲ್ಲದೇ ಪೋಲೀಸ್ ಇಲಾಖೆ ಸಿಬ್ಬಂದಿ ಭದ್ರತೆ ಸೇರಿದಂತೆ ಸುಗಮ ಸಂಚಾರ ವ್ಯವಸ್ಥೆಗೆ ಸಹಕರಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಪ್ರಮುಖರಾದ ಎಸ್‌.ಎಸ್‌. ಜ್ಯೋತಿಪ್ರಕಾಶ್‌, ಸಮಾಜ ಹಿರಿಯ ಮುಖಂಡರಾ ಎನ್‌.ಜೆ. ರಾಜಶೇಖರ್‌, ತಮ್ಮಡಿಹಳ್ಳಿ ನಗಾರಾಜ್‌, ಬಳ್ಳೆಕೆರೆ ಸಂತೋಷ್‌, ಉದ್ಯಮಿ ಬಾಳೆಕಾಯಿ ಮೋಹನ್‌ ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.