ದಿನಾಂಕ;12-3-2024 ರಿಂದ 16-3-2024 ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಈ ಬಾರಿ ಮಾರ್ಚ್ 12 ರ ಮಂಗಳವಾರ ಬೆಳಗಿನ ಜಾವ 5 ಗಂಟೆಗೆ ಸಮಿತಿ ವತಿಯಿಂದ ಮಂಗಳವಾದ್ಯದೊಂದಿಗೆ ಬಿ.ಬಿ.ರಸ್ತೆಯಲ್ಲಿನ ಬ್ರಾಹ್ಮಣಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ. ಆ ಕುಟುಂಬದ ಮುತ್ತೈದೆಯರು ಮಂಗಳದ್ರವ್ಯಾದಿಗಳೊಂದಿಗೆ ಮೆರವಣಿಗೆಯಲ್ಲಿ
ಬಾಸಿಂಗದೊಂದಿಗೆ ಗಾಂಧಿಬಜಾರಿಮಾರಿಕಾಂಬೆೆವಹನಯಲ್ಲಿರುವ ಶ್ರೀ ಮಾರಿಕಾಂಬೆಗೆ ಉಡಿ ತುಂಬಿ, ಪೂಜೆಸಲ್ಲಿಸುತ್ತಾರೆ. ತದ ನಂತರ ವಿಶ್ವಕರ್ಮ ಸಮಾಜದವರು
ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸುತ್ತಾರೆಮಂಗಳವಾರ ರಾತ್ರಿ 10 ಗಂಟೆಯವರೆಗೂ ಲಕ್ಷಾಂತರ ಮುತ್ತೈದೆಯರು ಶ್ರೀ ಮಾರಿಕಾಂಬೆಗೆ ಮತ್ತು
ನೀಡಿ ಉಡಿ ತುಂಬಿ ತಮ್ಮ ಪೂಜೆಯನ್ನು ಸಲ್ಲಿಸುತ್ತಾರೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರಾದಎಸ್.ಕೆ. ಮರಿಯಪ್ಪ ಹೇಳಿದರು.
ಇಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.ಇದೆ ದಿನದಿಂದು ಮಾರಿ ಗದ್ದುಗೆಯಲ್ಲಿ ಬೆಳಿಗ್ಗೆ 5 ರಿಂದ ಎಡೆ ಪೂಜೆ ಆರಂಭವಾಗುತ್ತದೆ. ಮಂಗಳವಾರ ರಾತ್ರಿ 9 ಗಂಟೆ ನಂತರ ಮಾರಿಕಾಂಬೆಯನ್ನು
ರಥದಲ್ಲಿ ಕೂರಿಸಿ ಮೆರವಣಿಗೆಯಲ್ಲಿ ಉಪ್ಪಾರ ಸಮಾಜ ಬಾಂಧವರು ಗದ್ದಿಗೆಗೆ ತಂದು ಪ್ರತಿಷ್ಠಾಪಿಸುತ್ತಾರೆ. ಈ ಮಧ್ಯೆ ಗಂಗಾಪರಮೇಶ್ವರಿ ದೇವಸ್ಥಾನದಿಂದ
ಗಂಗೆಪೂಜೆಯೊಂದಿಗೆ ಅಮ್ಮನವರನ್ನು ಮಂಗಳವಾದ್ಯದೊಂದಿಗೆ ಎದುರುಗೊಂಡು ಗಂಗಾಮತಸ್ಥ ಸಮಾಜದವರು ಪೂಜೆ ಸಲ್ಲಿಸುತ್ತಾರೆ.
ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿದ್ಯಾನಗರದ ಕರ್ಲಹಟ್ಟಿಯ ಹರಿಜನ ಸಮಾಜ ಬಾಂಧವರು ಬೇವಿನುಡುಗೆಯೊಂದಿಗೆ ಆಗಮಿಸಿ
ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿದ ನಂತರ ಅಮ್ಮನವರನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ ಎಂದರು.
ತದನಂತರ ಕುರುಬ ಜನಾಂಗದ ಗುತ್ಯಮ್ಮದೇವಾಲಯದ
ನೈವೇದ್ಯ ಮಾಡಿ ಪೂಜೆ ಸಲ್ಲಿಸುತ್ತಾರೆ. ಬುಧವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 10 ಗಂಟೆಯವರೆಗೆ ವಾಲ್ಮೀಕಿ
ಅರ್ಚಕರಾದ ಚೌಡಿಕೆ ಕುಟುಂಬದವರು
ಸಮಾಜದವರು, 10ರಿಂದ 2 ಗಂಟೆಯವರೆಗೆ ಉಪ್ಪಾರ ಸಮಾಜದವರು, ತದನಂತರ ರಾತ್ರಿ 11 ಗಂಟೆ ವರೆಗೆ ಮಡಿವಾಳ ಸಮಾಜದವರು ಸರದಿಯಂತೆ 4
ದಿನಗಳ ಕಾಲ ಗದ್ದಗೆಯಲ್ಲಿ ಅಮ್ಮನವರಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ಮಾರ್ಚ್ 16 ರ ಶನಿವಾರ ರಾತ್ರಿ 7 ಗಂಟೆಗೆ ಸಮಿತಿ ವತಿಯಿಂದ ದೇವಿಗೆ
ಮಹಾಮಂಗಳಾರತಿ ಸಲ್ಲಿಸಿದ್ದನಂತರ ಶ್ರೀ ಮಾರಿಕಾಂಬೆಯ ಉತ್ಸವ ವಿವಿಧ ಜಾನಪದ ತಂಡಗಳ ಮೆರುಗಿನೊಂದಿಗೆ ಲಕ್ಷಾಂತರ ಮಂದಿ ಭಕ್ತಾದಿಗಳು
ಅತ್ಯಂತ ಸಂಭ್ರಮದಿಂದ ಅಮ್ಮನವರನ್ನು ವನ ಪ್ರವೇಶಕ್ಕೆ ಕಳಿಸಿಕೊಡುವ ಮೂಲಕ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ತೆರೆ ಎಳೆಯಲಾಗುತ್ತದೆ.
ಮಡಿವಾಳ ಸಮಾಜದವರು ಅಮ್ಮನವರನ್ನು ಮಧ್ಯರಾತ್ರಿ ವನಕ್ಕೆ ತೆಗೆದುಕೊಂಡು ಹೋಗಿ ಅಂತಿಮವಾಗಿ ಸಮಾಜದ ಸಂಪ್ರದಾಯದಂತೆ ಶಾಸ್ತ್ರವನ್ನು ನಡೆಸಿ,ಪೂಜೆ ಸಲ್ಲಿಸಿ ವನದಿಂದ ಹಿಂದಿರುಗುತ್ತಾರೆ ಎಂದರು.
ಮಾರ್ಚ್ 15 ರಿಂದ 17 ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯದ ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ
ಅಂತರರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ ಎಂದರು.
ಶ್ರೀ ಮಾರಿಕಾಂಬ ಪೂಜಾ ವಿಧಿ ವಿಧಾನಶಿವಮೊಗ್ಗ ನಗರದ ಮಲೆನಾಡಿನ ಹೆಬ್ಬಾಗಿಲೆಂದೇ ಪ್ರಸಿದ್ಧಿ ಪಡೆದ ಕೆಳದಿ ಅರಸರ ಕೋಟೆ, ಅರಮನೆ, ಶ್ರೀ ಭೀಮೇಶ್ವರ, ಸೀತಾ ರಾಮಾಂಜನೇಯ
ದೇವಸ್ಥಾನ ಹಾಗೂ ವರಶಕ್ತಿ ಕೋಟೆ ಶ್ರೀ ಮಾರಿಕಾಂಬೆಯ ಗದ್ದುಗೆ ಇವುಗಳೆಲ್ಲಾ ತುಂಗಾನದಿಯ ತಟದಲ್ಲಿರುವುದೊಂದು ವಿಶೇಷ. ಸುಮಾರು 500
ವರ್ಷಗಳ ಹಿಂದೆ ಮಲೆನಾಡಿನ ಪ್ರಾಂತ್ಯದ ಆಡಳಿತ ನಡೆಸುತ್ತಿದ್ದ ಶಿಸ್ತಿನ ಶಿವಪ್ಪನಾಯಕ ಎಂಬ ಅರಸರು ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿಯೇ ಯುದ್ಧಕ್ಕೆ
ಹೊರಡುತ್ತಿದ್ದರೆಂಬುದು ಇತಿಹಾಸದಿಂದ ತಿಳಿದುಬರುತ್ತದೆ. ಬಯಲು ಮಾರಿಯೆಂದೇ ಜನರಿಂದ ಕರೆಯಲ್ಪಡುತ್ತಿದ್ದ ಶ್ರೀ ಮಾರಿಕಾಂಬೆ ಗದುಗೆ ಬಳಿ ಬಂದ
ಶ್ರೀ ಶ್ರೀಧರ ಸ್ವಾಮಿಗಳು ಇದು ಶಕ್ತಿ ಪೀಠ ವಾಗಿದು,ಈ ಮಹಾ ತಾಯಿಗೆ ನೇರಳು ಮಾಡಿ ಎಂದು ಊರಿನ ಪುರಪಿತೃಗಳಿಗೆ ತಿಳಿಸಿ ಸಾಗರದ ಕಡೆಗೆ
ಪಯಾಣ ಬೆಳೆಸಿದರು ತದನಂತರ ಕಾರ್ಯಪ್ರವೃತರಾದ ನಗರದಲ್ಲಿನ ಅನೇಕ ಗಣ್ಯರುಗಳು ಸೇರಿ ಸಮಿತಿಯೊಂದನ್ನು ರಚಿಸಿಕೊಂಡು ದೇವಾಲಯದ
ಅಭಿವೃದ್ಧಿ ಕಾರ್ಯಗಳನ್ನು ಕಾಲ ಕಾಲಕ್ಕೆ ನಡೆಸಿಕೊಂಡು ಬರುತ್ತಿದ್ದಾರೆ. ನೂರಾರು ವರ್ಷಗಳಿಂದ ಎರಡು ವರ್ಷಕೊಮ್ಮೆ ನಡೆಯುವ ಶ್ರೀ ಮಾರಿಕಾಂಬೆ
ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ದೇವಾಲಯ ಆವರಣದಲ್ಲಿ ಸಾರು ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಎನ್. ಮಂಜುನಾಥ- ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಮತ್ತು ಪಧಾದಿಕಾರಿಗಳು ಹಾಜರಿದ್ದರು

Leave a Comment