ಲೋಕಸಭಾ ಚುನಾವಣೆ ಘೋಷಣೆಯಾದರೂ ಶಿವಮೊಗ್ಗಕ್ಕೆ ಬಾರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಇದೀಗ ಶಿವಮೊಗ್ಗದಲ್ಲಿ ಬಹು ಚರ್ಚಿತವಾಗುತ್ತಿರುವ ವಿಷಯ ಏನೆಂದರೇ ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ  ದಿನಾಂಕ ಘೋಷಣೆಯಾಗಿದೆ.
ಆದರೂ  ಶಿವಮೊಗ್ಗಕ್ಕೆ ಇನ್ನು  ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿಲ್ಲ. ಈ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚಿತವಾಗುತ್ತಿರುವ ವಿಷಯವಾಗಿದೆ.ಈ ಬಗ್ಗೆ ಮತದಾರರು ಸಹ ಮಾತನಾಡಿಕೊಳ್ಳುತ್ತಿದ್ದಾರೆ.

 ಉಸ್ತುವಾರಿ ಸಚಿವ  ಮಧುಬಂಗಾರಪ್ಪರವರು ಶಿವಮೊಗ್ಗ ಜಿಲ್ಲೆಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಇದೇ ತಿಂಗಳ 20 ನೇ ತಾರೀಖು ಶಿವಮೊಗ್ಗ ಕ್ಕೆ ಬರುತ್ತಾರೆ ಎಂದು ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ  ಕಾಣಿಸಿಲ್ಲ. ಕಾರ್ಯಕರ್ತರ ಮತ್ತು ಮುಖಂಡರ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿಲ್ಲ.ಜಿಲ್ಲೆಯಲ್ಲಿ ಮತದಾರರನ್ನು ಬೇಟಿ ಮಾಡಿಲ್ಲ, ಸಂಪರ್ಕಿಸಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಭಾನುವಾರ ಇಂದು ಮದ್ಯಾಹ್ನ 12 ಗಂಟೆಗೆ ಸಂತ ಥಾಮಸ್ ಸಭಾಭವನ ಮಿಷನ್ ಕಾಂಪೌಂಡ್ ಶಿವಮೊಗ್ಗ ಇಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಮಾನ್ಯ ಸಚಿವರು ಶಾಸಕರುಗಳು ನಿಗಮ ಮಂಡಳಿ ಅಧ್ಯಕ್ಷರುಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿರುವರು. ಈ ಸಭೆಗೂ ಸಹ ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಹಾಜರಾಗುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  ಶಿವಮೊಗ್ಗ ಜಿಲ್ಲೆಯ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ರವರು ಈಗಾಗಲೇ ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಸುತ್ತಾಡಿ ಅನೇಕ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಹಾಗೂ ಮತದಾರರನ್ನು ಬೇಟಿಯಾಗಿ ಬಿಜೆಪಿ ಪಕ್ಷದ ಚಿಹ್ನೆಗೆ ಮತಹಾಕುವ ಮೂಲಕ ಅತ್ಯಧಿಕ ಮತಗಳ ಗೆಲುವು ಸಾಧಿಸಲು ಅವಕಾಶ ಮಾಡಿಕೊಡಿ ಎಂಬ ವಿನಂತಿಯನ್ನು ಮಾಡಿದ್ದಾರೆ.

ಈಗಾಗಲೇ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ನೀತಿಸಂಹಿತೆ ಸಹ ಜಾರಿಯಾಗಿದೆ.

1 ಕಾಮೆಂಟ್‌:

Blogger ನಿಂದ ಸಾಮರ್ಥ್ಯಹೊಂದಿದೆ.