ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಣದಲ್ಲಿ 23 ಅಭ್ಯರ್ಥಿಗಳು ಯಾರ್ಯಾರು ಅಂತೀರಾ ನೋಡಿ..

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಇಂದು  ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್,

ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.

 ಪಕ್ಷೇತರ ಅಭ್ಯರ್ಥಿ  ಕೆ.ಎಸ್ ಈಶ್ವರಪ್ಪನವರ ಚಿಹ್ನೆ:

ಬಿಜೆಪಿ ಬಂಡಾಯದ ಪಕ್ಷೇತರ ಅಭ್ಯರ್ಥಿ  ಕೆ.ಎಸ್.ಈಶ್ವರಪ್ಪನವರಿಗೆ  ಚುನಾವಣೆ ಆಯೋಗ ಚಿಹ್ನೆ ಬಿಡುಗಡೆ ಮಾಡಿದೆ. ಕಬ್ಬು ಮತ್ತು ರೈತನ ಚಿಹ್ನೆ ದೊರೆತಿದೆ. ಕ್ರಮ ಸಂಖ್ಯೆ 8 ಎಂದು ಸ್ಪಷ್ಟಪಡಿಸಲಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.