ಶ್ರೇಷ್ಠ ಪರಂಪರೆ ಹೊಂದಿರುವ ದೇಶ ಭಾರತ:ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ
ಭಾರತೀಯ ಮೌಲ್ಯಯುತ ಆಚರಣೆಗಳಿಂದ ಇಂದಿನ ಯುವಪೀಳಿಗೆ ದೂರಾಗುತ್ತಿದ್ದಾರೆ. ಮಕ್ಕಳಲ್ಲಿ ಧಾರ್ಮಿಕ ಚಿಂತನೆ ಮೂಡಿಸದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗಲಿದೆ. ಸನಾತನ ಸಂಸ್ಕೃತಿ ಆಚರಣೆಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ತಿಳಿಸಿದರು.
ಭಾರತ ದೇಶ ವಿಶ್ವದಲ್ಲಿಯೇ ವಿಶೇಷ ಸ್ಥಾನಮಾನ ಹೊಂದಿದ್ದು, ಶ್ರೇಷ್ಠ ಮೌಲ್ಯಯುತ ಐತಿಹಾಸಿಕ ಪರಂಪರೆ ಹಿನ್ನೆಲೆ ಹೊಂದಿರುವ ಕಾರಣಕ್ಕೆ ಭಾರತ ದೇಶವನ್ನು ವಿಶೇಷ ಗೌರವದಿಂದ ನೋಡುತ್ತಾರೆ. ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಸಂಗತಿಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದರು.
ಶ್ರಾವಣ ಮಾಸ ವಿಶೇಷ ತಿಂಗಳು ಆಗಿದ್ದು, ಧಾರ್ಮಿಕ ಆಚರಣೆಗಳಿಗೆ ವಿಶೇಷ ಪ್ರಾಶಸ್ತ್ಯ ನೀಡಲಾಗುತ್ತದೆ. ಶ್ರಾವಣ ಮಾಸದಲ್ಲಿನ ಧಾರ್ಮಿಕ ಕಾರ್ಯಗಳು ಸೇರಿದಂತೆ ಮನೆಗಳಲ್ಲಿ ದಿನನಿತ್ಯ ಪಾಲಿಸುವ ಪೂಜೆಯ ಕ್ರಮಗಳನ್ನು ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಲಲಿತ ಸಹಸ್ರನಾಮ ಪಾರಾಯಣದಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ್, ಭಜನಾ ಪರಿಷತ್ ಮುಖ್ಯಸ್ಥ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮತ್ತಿತರರು ಪಾಲ್ಗೊಂಡಿದ್ದರು.

Leave a Comment