ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಅ.18 ರಿಂದ 21 ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ-ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ
ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024ನ್ನು 'ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ' ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲಾಗುತ್ತಿದೆ ಎಂದು ಗೌರವಾನ್ವಿತ ಉಲಪತಿಗಳಾದ ಡಾ.ಆರ್.ಸಿ.ಜಗದೀಶ ಹೇಳಿದರು.

ಇಂದು ಬೆಳಿಗ್ಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಕೃಷಿ ಮೇಳವನ್ನು ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ಉದ್ಘಾಟಿಸಲಿದ್ದು, ಮಾನ್ಯ ಕೃಷಿ
ಸಚಿವರು, ಸನ್ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಸನ್ಮಾನ್ಯ ಗಣಿ
ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಾವಣಗೆರೆ, ಮಾನ್ಯ ಲೋಕ
ಸಭಾ ಸದಸ್ಯರು, ಮಾನ್ಯ ವಿಧಾನ ಸಭಾ ಶಾಸಕರುಗಳು ಮತ್ತು ಸರ್ಕಾರದ ಇನ್ನಿತರ ಮಾನ್ಯರುಗಳು
ಭಾಗವಹಿಸಲಿದ್ದಾರೆ ಎಂದರು.

ಕೃಷಿ ಮೇಳದ ಸಂದರ್ಭದಲ್ಲಿ ಕೃಷಿ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಯ 'ಸಸ್ಯಕಾಶಿ'ಗಳ
ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳಿಂದ ಕೃಷಿ
ಮತ್ತು ತೋಟಗಾರಿಕೆಯಲ್ಲಿ ವಿಶೇಷ ಸಾಧನೆಗೈದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ
ನೀಡಲಾಗುತ್ತಿದೆ. ಅಲ್ಲದೆ ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಮತ್ತು ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಕ
ಕೈಪಿಡಿಗಳ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಕೃಷಿ ಪರಿಕರ ವಿತರಕರು, ವಿಜ್ಞಾನಿಗಳು ಹಾಗೂ ಪ್ರಗತಿಪರ ರೈತ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ
ಸಂವಾದವನ್ನು ಏರ್ಪಡಿಸಲಾಗಿದೆ ಎಂದರು.

 *ಕೃಷಿ ಮತ್ತು ತೋಟಗಾರಿಕಾ ಮೇಳದ ವಿಶೇಷತೆಗಳು :* 

ತಂತ್ರಜ್ಞಾನ ಉದ್ಯಾನವನ
ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ
ಹೈ-ಟೆಕ್ ತೋಟಗಾರಿಕೆ-ಹೈಡೋಫೋನಿಕ್ ಕೃಷಿ
ಪುಷ್ಪ ಕೃಷಿ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ
ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ
ಸಿರಿಧಾನ್ಯಗಳ ಮಹತ್ವ
ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ

 *ಕೃಷಿ ಮತ್ತು ತೋಟಗಾರಿಕಾ ಮೇಳ – 2024 ರ ತಾಂತ್ರಿಕ ಸಮಾವೇಶ:* 
ದಿನಾಂಕ 18.10.2024 ರಂದು ಕೃಷಿ ಮತ್ತು ತೋಟಗಾರಿಕೆ ಮೇಳ 2024 ರ ತಾಂತ್ರಿಕ ಸಮಾವೇಶದಲ್ಲಿ
ವಿಕಸಿತ ಕೃಷಿಯಲ್ಲಿ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ, ಅಡಿಕೆ ಬೆಳೆಯಲ್ಲಿ ಸಮಗ್ರ ರೋಗ ನಿರ್ವಹಣೆ, ಅಡಿಕೆ
ಉಪಉತ್ಪನ್ನಗಳ ಸದ್ಭಳಕೆ, ಅಡಿಕೆ ಮಾರುಕಟ್ಟೆ ವ್ಯವಸ್ಥೆ ಮತ್ತು ಮೌಲ್ಯವರ್ಧನೆ ವಿಷಯಗಳ ಬಗ್ಗೆ ವಿಜ್ಞಾನಿಗಳು,
ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ ಎಂದರು.

ದಿನಾಂಕ 19.10.2024 ರಂದು ಕೃಷಿ ಮತ್ತು ತೋಟಗಾರಿಕೆ ಮೇಳ 2024 ರ ತಾಂತ್ರಿಕ ಸಮಾವೇಶದಲ್ಲಿ
ಸಧೃಡ ಭಾರತಕ್ಕಾಗಿ ವಿಕಸಿತ ಕೃಷಿ, ಕೃಷಿಯಲ್ಲಿ ಸುಸ್ಥಿರತೆಗೆ ಅರಣ್ಯ ಕೃಷಿ, ಪಶು ಸಂಗೋಪನೆ-ಆಹಾರ ಭದ್ರತೆ,
ಕೃಷಿಯಲ್ಲಿ ಡೋನ್ ಬಳಕೆ, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ
ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ ಎಂದರು.

ದಿನಾಂಕ 20.10.2024 ರಂದು ಕೃಷಿ ಮತ್ತು ತೋಟಗಾರಿಕೆ ಮೇಳ 2024 ರ ತಾಂತ್ರಿಕ ಸಮಾವೇಶದಲ್ಲಿ
ವೈಜ್ಞಾಭಿಕ ಶುಂಠಿ ಮತ್ತು ಕಾಳುಮೆಣಸು ಕೃಷಿ, ಕಾಳುಮೆಣಸು ಕೃಷಿ- ರೈತರ ಅನುಭವ, ಗೋಡಂಬಿ ಬೆಳೆ ಸಂಸ್ಕರಣೆ
ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಸಾಂಬಾರು ಬೆಳೆಗಳ ಮೌಲ್ಯವರ್ಧನೆ
ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು
ಏರ್ಪಡಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ  ಕೃಷಿ ಮಹಾವಿದ್ಯಾಲಯದ
 ಡಾ. ಬಿ.ಹೇಮ್ಲಾ ನಾಯಕ್,ಡಾ.ನಾರಾಯಣ ಎಸ್. ಸಾವರ್ಕರ್,ಡಾ.ಕೆ.ಟಿ.ಗುರುಮೂರ್ತಿ,ಡಾ.ತಿಪ್ಪೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.